ಅಕ್ರಮ-ಸಕ್ರಮ, ಬಗರ್‌ಹುಕುಂ ಅರ್ಜಿ ಸಲ್ಲಿಕೆಗೆ ಮತ್ತೆ ಅವಕಾಶ

By Suvarna Web DeskFirst Published Apr 18, 2017, 8:40 AM IST
Highlights

ಸ್ಥಳೀಯ ಗ್ರಾಮ ಪಂಚಾಯಿತಿ ಮತ್ತು ಕಂದಾಯ ಅಧಿಕಾರಿಗಳೇ ಪ್ರತಿ ಗ್ರಾಮ ಪಂಚಾಯತಿಗಳಿಗೂ ಭೇಟಿ ನೀಡಿ ಫಲಾನುಭವಿಗಳನ್ನು ಗುರುತಿಸಿ ಅರ್ಜಿ ಪಡೆಯಬೇಕೆಂದೂ ಸೂಚಿಸಲು ಸರ್ಕಾರ ನಿರ್ಧರಿಸಿದೆ ಎಂದು ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ತಿಳಿಸಿದ್ದಾರೆ

ಬೆಂಗಳೂರು: ರಾಜ್ಯ ಸರ್ಕಾರ ಗ್ರಾಮೀಣ ಮತ್ತು ನಗರ ಪ್ರದೇಶಗಳ ಮನೆಗಳ ಅಕ್ರಮ-ಸಕ್ರಮಕ್ಕೆ ಮತ್ತೆರಡು ತಿಂಗಳು ಅವಕಾಶ ನೀಡಲು ಚಿಂತನೆ ನಡೆಸಿದೆ. ಅಷ್ಟೇ ಅಲ್ಲ, ಬಹುನಿರೀಕ್ಷಿತ ಬಗರ್‌ಹುಕುಂ ಅರ್ಜಿ ಸಲ್ಲಿಕೆಗೂ ಅವಕಾಶ ನೀಡುವ ಆಲೋಚನೆ ಮಾಡಿದೆ. ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಸ್ಥಳೀಯ ಗ್ರಾಮ ಪಂಚಾಯಿತಿ ಮತ್ತು ಕಂದಾಯ ಅಧಿಕಾರಿಗಳೇ ಪ್ರತಿ ಗ್ರಾಮ ಪಂಚಾಯತಿಗಳಿಗೂ ಭೇಟಿ ನೀಡಿ ಫಲಾನುಭವಿಗಳನ್ನು ಗುರುತಿಸಿ ಅರ್ಜಿ ಪಡೆಯಬೇಕೆಂದೂ ಸೂಚಿಸಲು ಸರ್ಕಾರ ನಿರ್ಧರಿಸಿದೆ ಎಂದು ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ನೆರೆ ಪರಿಹಾರ:

ನೆರೆ ಸಂತ್ರಸ್ತರ ಪರಿಹಾರಕ್ಕೆ ಕೇಂದ್ರ ಬಿಡುಗಡೆ ಮಾಡಿರುವ ರೂ.165 ಕೋಟಿ ನೆರವನ್ನು 15 ದಿನಗಳಲ್ಲಿ ಬಿಡುಗಡೆ ಮಾಡಲಾಗುವುದು ಎಂದು ಕಾಗೋಡು ತಿಮ್ಮಪ್ಪ ತಿಳಿಸಿದರು. ಕಳೆದ ಸೆಪ್ಟೆಂಬರ್‌ನಲ್ಲಿ ಉತ್ತರ ಕರ್ನಾಟಕದಲ್ಲಿ ಭಾರೀ ಹಾನಿ ಮಾಡಿದ್ದ ಪ್ರವಾಹಕ್ಕೆ ಕೇಂದ್ರ ರೂ.165 ಕೋಟಿ ಬಿಡುಗಡೆ ಮಾಡಿದೆ ಎಂದರು.

click me!