ಸಂಸತ್ತಿನಲ್ಲಿ ಪ್ರತಿಧ್ವನಿಸಿದ ಐಟಿ ದಾಳಿ: ಕೇಂದ್ರವನ್ನು ತರಾಟೆಗೆ ತೆಗದುಕೊಂಡ ಪ್ರತಿಪಕ್ಷಗಳು

Published : Aug 02, 2017, 03:14 PM ISTUpdated : Apr 11, 2018, 12:57 PM IST
ಸಂಸತ್ತಿನಲ್ಲಿ ಪ್ರತಿಧ್ವನಿಸಿದ ಐಟಿ ದಾಳಿ: ಕೇಂದ್ರವನ್ನು ತರಾಟೆಗೆ ತೆಗದುಕೊಂಡ ಪ್ರತಿಪಕ್ಷಗಳು

ಸಾರಾಂಶ

ಇಂಧನ ಸಚಿವ ಡಿ.ಕೆ. ಶಿವಕುಮಾರ್ ನಿವಾಸದ ಮೇಲಿನ ದಾಳಿಯು ಇಂದು ಸಂಸತ್ತಿನಲ್ಲೂ ಪ್ರತಿಧ್ವನಿಸಿದೆ. ರಾಜ್ಯಸಭೆಯಲ್ಲಿ, ಶಿವಕುಮಾರ್ ನಿವಾಸ ಹಾಗೂ ರೆಸಾರ್ಟ್ ಮೇಲಿನ ದಾಳಿಯನ್ನು ಖಂಡಿಸಿರುವ ಪ್ರತಿಪಕ್ಷಗಳು, ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ.

ನವದೆಹಲಿ: ಇಂಧನ ಸಚಿವ ಡಿ.ಕೆ. ಶಿವಕುಮಾರ್ ನಿವಾಸದ ಮೇಲಿನ ದಾಳಿಯು ಇಂದು ಸಂಸತ್ತಿನಲ್ಲೂ ಪ್ರತಿಧ್ವನಿಸಿದೆ.

ರಾಜ್ಯಸಭೆಯಲ್ಲಿ, ಶಿವಕುಮಾರ್ ನಿವಾಸ ಹಾಗೂ ರೆಸಾರ್ಟ್ ಮೇಲಿನ ದಾಳಿಯನ್ನು ಖಂಡಿಸಿರುವ ಪ್ರತಿಪಕ್ಷಗಳು, ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ.

ಕೇಂದ್ರೀಯ ಸಂಸ್ಥೆಗಳನ್ನು ಸರ್ಕಾರವು ದುರ್ಬಳಕೆ ಮಾಡುತ್ತಿದ್ದು ರಾಜಕೀಯ ಸೇಡು ತೀರಿಸುವ ಕೆಲಸ ಮಾಡುತ್ತಿದೆಯೆಂದು ಪ್ರತಿಪಕ್ಷಗಳು ಪ್ರತಿಭಟನೆ ನಡೆಸಿವೆ.

ಆಧಿಕಾರದ ದುರ್ಬಳಕೆ ಮಾಡುವುದು ಕೇಂದ್ರ ಸರ್ಕಾರದ ಚಾಳಿಯಾಗಿಬಿಟ್ಟಿದೆಯೆಂದು ಹಿರಿಯ ಕಾಂಗ್ರೆಸ್ ನಾಯಕ ಆನಂದ್ ಶರ್ಮಾ ಕಿಡಿಕಾರಿದ್ದಾರೆ.

ಶಾಸಕರಿಗೆ ರೂ. 15 ಕೋಟಿ ಆಮಿಷವೊಡ್ಡಿರುವ ಬಿಜೆಪಿಗರ ನಿವಾಸದ ಮೇಲೆ ಯಾಕೆ ದಾಳಿ ನಡೆಯುವುದಿಲ್ಲವೆಂದು ಕಾಂಗ್ರೆಸ್ ಇನ್ನೋರ್ವ ನಾಯಕ ಗುಲಾಂ ನಬೀ ಆಝಾದ್ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.

ಲೋಕಸಭೆಯಲ್ಲಿ ಶಿವಕುಮಾರ್ ನಿವಾಸದ ಮೇಲೆ ಐಟಿ ದಾಳಿಯನ್ನು ಖಂಡಿಸಿರುವ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ಗುಜರಾತಿನ ರಾಜ್ಯಸಭೆಯಲ್ಲಿ ಕೇವಲ ಒಬ್ಬ  ಅಭ್ಯರ್ಥಿಯನ್ನು ಸೋಲಿಸಲು ಇದೆಲ್ಲಾ ಮಾಡಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗುಜರಾತಿನಲ್ಲಿ ರಾಜ್ಯಸಭೆಗೆ ಕಾಂಗ್ರೆಸ್’ನಿಂದ ಹಿರಿಯ ನಾಯಕ ಅಹಮದ್ ಪಟೇಲ್ ಸ್ಫರ್ಧಿಸಿದ್ದಾರೆ.

ಪ್ರತಿಪಕ್ಷಗಳ ಗದ್ದಲದಿಂದಾಗಿ ಕಲಾಪಗಳನ್ನು ನಾಳೆವರೆಗೆ ಮುಂದೂಡಲಾ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

SSLC ಫಲಿತಾಂಶ ಪ್ರಗತಿ: ಮಧ್ಯರಾತ್ರಿ ವಿದ್ಯಾರ್ಥಿಗಳ ಮನೆ ಬಾಗಿಲಿಗೆ ಬಂದ BEO!
ಹಾಸನದ ತಿರುಪತಿಹಳ್ಳಿ ಬೆಟ್ಟದ ಮೇಲೆ 50ಕ್ಕೂ ಅಧಿಕ ಉಲ್ಕೆಗಳ ಸುರಿಮಳೆ!