ಕೇಜ್ರಿವಾಲ್ ರಾಜಿನಾಮೆಗೆ ಪ್ರತಿಪಕ್ಷಗಳಿಂದ ಒತ್ತಾಯ

By Suvarna Web DeskFirst Published May 7, 2017, 11:34 AM IST
Highlights

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್  ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ರೂ.2 ಕೋಟಿ ಲಂಚವನ್ನು ಪಡೆದಿದ್ದಾರೆ ಎನ್ನುವ ವಿಚಾರವನ್ನು ಇಟ್ಟುಕೊಂಡು ಪ್ರತಿಪಕ್ಷಗಳು ಕೇಜ್ರಿವಾಲ್ ರಾಜಿನಾಮೆಗೆ ಒತ್ತಾಯಿಸಿದ್ದಾರೆ.

ನವದೆಹಲಿ (ಮೇ.07): ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್  ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ರೂ.2 ಕೋಟಿ ಲಂಚವನ್ನು ಪಡೆದಿದ್ದಾರೆ ಎನ್ನುವ ವಿಚಾರವನ್ನು ಇಟ್ಟುಕೊಂಡು ಪ್ರತಿಪಕ್ಷಗಳು ಕೇಜ್ರಿವಾಲ್ ರಾಜಿನಾಮೆಗೆ ಒತ್ತಾಯಿಸಿದ್ದಾರೆ.

ಮುಖ್ಯಮಂತ್ರಿ ಹುದ್ದೆಯಲ್ಲಿ ಮುಂದುವರೆಯಲು ಕೇಜ್ರಿವಾಲ್’ಗೆ ಯಾವುದೇ ನೈತಿಕತೆಯಿಲ್ಲ. ಕೂಡಲೇ ಅವರು ರಾಜಿನಾಮೆ ನೀಡಬೇಕು ಎಂದು ಹೇಳಿದ್ದಾರೆ. ಕೇಜ್ರಿವಾಲ್ ಭ್ರಷ್ಟಾಚಾರದಲ್ಲಿ ನೇರವಾಗಿ ಭಾಗಿಯಾಗಿದ್ದಾರೆಂದು ನಾನು ಸಾಕಷ್ಟು ಬಾರಿ ಹೇಳಿದ್ದೆ. ಮಿಶ್ರಾರವರು ಅದನ್ನು ಸಾಬೀತುಪಡಿಸಿದ್ದಾರೆ ಎಂದು ದೆಹಲಿ ಬಿಜೆಪಿ ಅಧ್ಯಕ್ಷ ಮನೋಜ್ ತಿವಾರಿ ಹೇಳಿದ್ದಾರೆ.

ಕಪಿಲ್ ಮಿಶ್ರಾ ಮಾಡಿರುವುದು ಕೇವಲ ಆರೋಪವಲ್ಲ. ಪ್ರತ್ಯಕ್ಷದರ್ಶಿಗಳು ನೀಡುವ ಪುರಾವೆಯು ಕೇಜ್ರಿವಾಲ್ ವಿರುದ್ಧ ಕ್ರಿಮಿನಲ್ ವಿಚಾರಣೆ ನಡೆಸಲು ಆದೇಶಿಸಬಹುದು. ಎಸಿಬಿ ಹಾಗೂ ಸಿಬಿಐ ಕೇಜ್ರಿವಾಲ್ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳಬೇಕು. ಹಾಗೂ ಎಫ್ ಐಆರ್ ದಾಖಲಿಸಬೇಕು ಎಂದು ದೆಹಲಿ ಕಾಂಗ್ರೆಸ್ ಘಟಕದ ಅಧ್ಯಕ್ಷ ಅಜಯ್ ಮೇಕನ್ ಹೇಳಿದ್ದಾರೆ.

ಕೇಜ್ರಿವಾಲ್ ಮೇಲಿರುವ ಆರೋಪಕ್ಕೆ ಪ್ರತಿಕ್ರಿಯಿಸುತ್ತಾ, ನಾನು ಕಳೆದ 40 ವರ್ಷಗಳಿಂದ ಭ್ರಷ್ಟಾಚಾರದ ವಿರುದ್ಧ ಹೋರಾಡುತ್ತಿದ್ದೇನೆ. ಅರವಿಂದ್ ಕೇಜ್ರಿವಾಲ್ ಕೂಡಾ ನನ್ನ ಜೊತೆ ನಿಂತಿದ್ದರು. ಈಗ ಅವರ ವಿರುದ್ಧವೇ ಭ್ರಷ್ಟಾಚಾರ ಆರೋಪ  ಕೇಳಿ ನಿರಾಸೆಯಾಗಿದೆ. ಮಾತುಗಳೇ ಹೊರಡುತ್ತಿಲ್ಲವೆಂದು ಅಣ್ಣಾ ಹಜಾರೆ ಹೇಳಿದ್ದಾರೆ.

 

click me!