
ಬೆಂಗಳೂರು(ನ.24): ಬಿಜೆಪಿ ನಾಯಕ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಸಚಿವ ವಿನಯ್ ಕುಲಕರ್ಣಿ ಹೆಸರು ಕೇಳಿಬರುತ್ತಿರುವ ಹಿನ್ನಲೆಯಲ್ಲಿ ತಕ್ಷಣವೇ ರಾಜೀನಾಮೆ ನೀಡಬೇಕು ಎಂದು ವಿರೋಧ ಪಕ್ಷಗಳು ಆಗ್ರಹಿಸಿವೆ.
ವಿಧಾನಸಭೆ ಕಲಾಪದಲ್ಲಿ ಮತ್ತೆ ಸುವರ್ಣ ನ್ಯೂಸ್ ವರದಿ ಪ್ರತಿಧ್ವನಿಸಿದ್ದು, ಈ ಪ್ರಕರಣದ ಕುರಿತಂತೆ ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಚರ್ಚೆಗೆ ಅವಕಾಶ ನೀಡುವಂತೆ ಮನವಿ ಮಾಡಿಕೊಂಡರು. ಅಲ್ಲದೇ ಸಚಿವ ವಿನಯ್ ಕುಲಕರ್ಣಿ ಸಾಕ್ಷಿಗಳ ಮೇಲೆ ಬೆದರಿಕೆ ಹಾಕುತ್ತಿದ್ದಾರೆ. ಯೋಗೀಶ್ ಗೌಡ ಪರ ವಕೀಲರಿಗೂ ಧಮ್ಕಿ ಹಾಕುತ್ತಿದ್ದಾರೆ. ಹೀಗಾಗಿ ಕೂಡಾಲೇ ವಿನಯ್ ಕುಲಕರ್ಣಿ ರಾಜೀನಾಮೆ ಪಡೆಯಬೇಕು ಎಂದು ಆಗ್ರಹಿಸಿದ್ದರು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸುವರ್ಣ ನ್ಯೂಸ್ 'ಮಿನಿಸ್ಟರ್&ಮರ್ಡರ್' ಹೆಸರಿನಲ್ಲಿ ಗುರುವಾರ ದಿನವಿಡಿ ಸುದ್ದಿ ಪ್ರಸಾರ ಮಾಡುವ ಮೂಲಕ ಕನ್ನಡ ಸುದ್ದಿಮಾಧ್ಯಮದಲ್ಲಿ ಸಂಚಲನ ಮೂಡಿಸಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.