
ಚೆನ್ನೈ(ಏ.22): ಅಣ್ಣಾ ಡಿಎಂಕೆಯ ಉಭಯ ಬಣಗಳ ವಿಲೀನ ನಿಶ್ಚಿತವಾಗಿದ್ದು, ತಮಿಳುನಾಡು ಮುಖ್ಯಮಂತ್ರಿಯಾಗಿ ಒ. ಪನ್ನೀರಸೆಲ್ವಂ ಮರಳಲಿದ್ದಾರೆ. ಹಾಲಿ ಮುಖ್ಯಮಂತ್ರಿ ಎಡಪ್ಪಾಡಿ ಕೆ. ಪಳನಿಸ್ವಾಮಿ ರಾಜೀನಾಮೆ ನೀಡಲಿದ್ದು, ಅಣ್ಣಾ ಡಿಎಂಕೆ ಪ್ರಧಾನ ಕಾರ್ಯದರ್ಶಿ ಆಗಲಿದ್ದಾರೆ ಎಂದು ಪಕ್ಷದ ಹಿರಿಯ ಮುಖಂಡರೊಬ್ಬರು ಹೇಳಲಿದ್ದಾರೆ.
ಇದೇ ವೇಳೆ ಮತದಾರರಿಗೆ ಹಣ ಹಂಚಿದ ಆರೋಪದ ಮೇರೆಗೆ ಆದಾಯ ತೆರಿಗೆ ದಾಳಿಗೊಳಗಾದ ಮಂತ್ರಿ ಸಿ. ವಿಜಯಭಾಸ್ಕರ್ ಅವರನ್ನು ಕೈಬಿಡುವ ಸಾಧ್ಯತೆ ಇದೆ ಎಂದೂ ಅವರು ಹೇಳಿದ್ದಾರೆ. ಈ ಮೂಲ ವಿಷಯಗಳು ಇತ್ಯರ್ಥವಾಗಿದ್ದು, ಇನ್ನುಳಿದ ವಿಷಯಗಳಿಗೆ ವಿಲೀನ ಮಾತುಕತೆಗಳು ಶೀಘ್ರ ಆರಂಭವಾಗಲಿವೆ ಎಂದು ಅವರು ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.