ರಾಜ್ಯದಲ್ಲಿ ಒವೈಸಿ ಪಕ್ಷ ಏಕಾಂಗಿಯಾಗಿ ಸ್ಪರ್ಧೆ

By Suvarna Web DeskFirst Published Mar 28, 2018, 9:03 AM IST
Highlights

ಮೇ 12ರಂದು ನಡೆಯಲಿರುವ ಕರ್ನಾಟಕ ವಿಧಾನಸಭೆ ಚುನಾವಣೆಗೆ ಸಂಸದ ಅಸಾದುದ್ದೀನ್‌ ಒವೈಸಿ ಅವರ ಅಖಿಲ ಭಾರತ ಮಜ್ಲಿಸ್‌ ಎ ಇತ್ತೆಹಾದುಲ್‌ ಮುಸ್ಲಿಮೀನ್‌ (ಎಐಎಂಐಎಂ) ಪಕ್ಷ ಪಕ್ಷ ಸ್ಪರ್ಧಿಸಲಿದೆ.

ಪಿಟಿಐ ಹೈದರಾಬಾದ್‌: ಮೇ 12ರಂದು ನಡೆಯಲಿರುವ ಕರ್ನಾಟಕ ವಿಧಾನಸಭೆ ಚುನಾವಣೆಗೆ ಸಂಸದ ಅಸಾದುದ್ದೀನ್‌ ಒವೈಸಿ ಅವರ ಅಖಿಲ ಭಾರತ ಮಜ್ಲಿಸ್‌ ಎ ಇತ್ತೆಹಾದುಲ್‌ ಮುಸ್ಲಿಮೀನ್‌ (ಎಐಎಂಐಎಂ) ಪಕ್ಷ ಪಕ್ಷ ಸ್ಪರ್ಧಿಸಲಿದೆ.

‘ನಾವು ಕರ್ನಾಟಕ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದೇವೆ. ಆದರೆ ಎಷ್ಟುಸ್ಥಾನಗಳು ಎಂಬ ಬಗ್ಗೆ ಇನ್ನೂ ನಿರ್ಣಯವಾಗಿಲ್ಲ’ ಎಂದು ಪಕ್ಷದ ಮೂಲಗಳು ಮಂಗಳವಾರ ಹೇಳಿವೆ. ‘ನಾವು ಏಕಾಂಗಿಯಾಗಿ ಸ್ಪರ್ಧಿಸಲಿದ್ದು, ಯಾವುದೇ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳಲ್ಲ’ ಎಂದೂ ಅವು ಸ್ಪಷ್ಟಪಡಿಸಿವೆ.

ತೆಲಂಗಾಣ ವಿಧಾನಸಭೆಯಲ್ಲಿ ಒವೈಸಿ ಪಕ್ಷದ 7 ಶಾಸಕರಿದ್ದಾರೆ. ಒವೈಸಿ ಪಕ್ಷ ಸ್ಪರ್ಧಿಸಿದರೆ ಮುಸ್ಲಿಂ ಮತಗಳು ವಿಭಜನೆಯಾಗಿ ತನ್ನ ಜಯಕ್ಕೆ ಅಡ್ಡಿಯಾಗಬಹುದು ಎಂಬುದು ಕಾಂಗ್ರೆಸ್‌ ಪಕ್ಷದ ಆತಂಕ.

click me!