ಹಜ್ ಸಬ್ಸಿಡಿ ರದ್ದು: ಕೇಂದ್ರಕ್ಕೆ ಒವೈಸಿ ಸವಾಲ್

Published : Jan 16, 2018, 08:32 PM ISTUpdated : Apr 11, 2018, 12:59 PM IST
ಹಜ್ ಸಬ್ಸಿಡಿ ರದ್ದು: ಕೇಂದ್ರಕ್ಕೆ ಒವೈಸಿ ಸವಾಲ್

ಸಾರಾಂಶ

ಹಜ್ ಸಬ್ಸಿಡಿಯನ್ನು ರದ್ದುಗೊಳಿಸಿರುವ ಕ್ರಮವನ್ನು ಸ್ವಾಗತಿಸಿದ ಎಐಎಂಐಎಂ ಮುಖಂಡ ಅಸಾದುದ್ದೀನ್ ಒವೈಸಿ   ಆ ಹಣವನ್ನು ಸಂಪೂರ್ಣವಾಗಿ ಹೆಣ್ಮಕ್ಕಳ ಶಿಕ್ಷಣಕ್ಕಾಗಿ ವ್ಯಯಿಸುವಂತೆ ಕೇಂದ್ರ ಸರ್ಕಾರಕ್ಕೆ ಸವಾಲ್

ನವದೆಹಲಿ: ಹಜ್ ಸಬ್ಸಿಡಿಯನ್ನು ರದ್ದುಗೊಳಿಸಿರುವ ಕ್ರಮವನ್ನು ಎಐಎಂಐಎಂ ಮುಖಂಡ ಅಸಾದುದ್ದೀನ್ ಒವೈಸಿ ಸ್ವಾಗತಿಸಿದ್ದು,  ಆ ಹಣವನ್ನು ಸಂಪೂರ್ಣವಾಗಿ ಹೆಣ್ಮಕ್ಕಳ ಶಿಕ್ಷಣಕ್ಕಾಗಿ ವ್ಯಯಿಸುವಂತೆ ಕೇಂದ್ರ ಸರ್ಕಾರಕ್ಕೆ ಸವಾಲೆಸೆದಿದ್ದಾರೆ.

ಹಜ್ ಸಬ್ಸಿಡಿಯನ್ನು ರದ್ದುಗೊಳಿಸುವಂತೆ 2006ರಿಂದಲೇ ನಾನು ಆಗ್ರಹಿಸುತ್ತಾ ಬಂದಿದ್ದೇನೆ. ಆ ಹಣವನ್ನು ಮುಸ್ಲಿಮ್ ಮಕ್ಕಳ, ವಿಶೇಷವಾಗಿ ಹೆಣ್ಮಕ್ಕಳ, ಶಿಕ್ಷಣಕ್ಕಾಗಿ ವ್ಯಯಿಸಬೇಕು. ಆದರೆ ಹೆಚ್ಚು ಪ್ರಚಾರ ಗಿಟ್ಟಿಸಿಕೊಳ್ಳುವ ಅವಶ್ಯಕತೆಯಿಲ್ಲ,  2012ರಲ್ಲೇ ಈ ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು ಬಂದಿದೆ, ಎಂದು ಒವೈಸಿ ಹೇಳಿದ್ದಾರೆ.

ರೂ. 2000 ಕೋಟಿಯನ್ನು ಮುಸ್ಲಿಮ್ ಹೆಣ್ಮಕ್ಕಳ ಶಿಕ್ಷಣಕ್ಕಾಗಿ ವ್ಯಯಿಸುವ ಮೂಲಕ ಕೇಂದ್ರವು ತನ್ನ ಮಾತಿನಂತೆ ನಡೆದುಕೊಳ್ಳಬೇಕು. ಮೋದಿ ಸರ್ಕಾರವು ಇದನ್ನು ಮಾಡುವುದೇ? 2018-19ರ ಬಜೆಟ್’ನಲ್ಲಿ ನೋಡೋಣ,  ಎಂದು ಒವೈಸಿ ಸವಾಲೆಸೆದಿದ್ದಾರೆ.

ಕೇಂದ್ರ ಸರ್ಕಾರವು ಇಂದು ಮಹತ್ವದ ನಿರ್ಧಾರವನ್ನು ಕೈಗೊಂಡಿದ್ದು, ಮುಸ್ಲಿಮರ ಹಜ್​ ಯಾತ್ರೆಗೆ ನೀಡಲಾಗುತ್ತಿದ್ದ ಸಬ್ಸಿಡಿ ರದ್ದುಗೊಳಿಸಿದೆ.

​ಈ ನಿರ್ಧಾರವನ್ನು ಇಂದು ಪ್ರಕಟಿಸಿರುವ ಅಲ್ಪಸಂಖ್ಯಾತ ಖಾತೆ ಸಚಿವ ಮುಕ್ತಾರ್​ ಅಬ್ಬಾಸ್​ ನಖ್ವಿ,  ಅಲ್ಪಸಂಖ್ಯಾತ ಮಹಿಳೆಯರ ಶ್ರೇಯೋಭಿವೃದ್ದಿಗೆ ಅದನ್ನು ಬಳಸಿಕೊಳ್ಳಲಾಗುವುದೆಂದು ಅವರು ಹೇಳಿದ್ದಾರೆ.

ಈ ವರ್ಷದಿಂದಲೇ ಹಜ್​ ಯಾತ್ರೆಗೆ ಈ ನಿರ್ಧಾರವು ಅನ್ವಯವಾಗಲಿದೆ ಎಂದು ಅವರು ತಿಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಿಡ್ನಿ ಶೂಟಿಂಗ್ ದಾಳಿಗೆ ಪಾಕಿಸ್ತಾನ ಸಂಪರ್ಕ: ಆರೋಪಿ ಲಾಹೋರ್ ಮೂಲದ ನವೀದ್ ಅಕ್ರಮ್; ಫೋಟೋ ವೈರಲ್!
ತುರುವೇಕೆರೆ: ದೇವರ ಮೇಲೆ ಹಾಕಿದ್ದ 500 ಗ್ರಾಂ ಸರ, 10 ಸಾವಿರ ರೂ. ನಗದು ಕದ್ದ ಕಳ್ಳರು!