
ನವದೆಹಲಿ(ಜೂ.8): ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಆರ್ ಎಸ್ಎಸ್ ಕಾರ್ಯಕ್ರಮಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದ ಕಾಂಗ್ರೆಸ್ ನಾಯಕರು ಒಂದೆಡೆಯಾದರೆ, ಪ್ರಣಬ್ ನಿರ್ಧಾರವನ್ನು ಬೆಂಬಲಿಸಿದ್ದ ಪಿ. ಚಿದಂಬರಂ ಮತ್ತೊಂದು ಕಡೆ. ಇದೇ ಕಾರಣಕ್ಕೆ ಪ್ರಣಬ್ ಅವರ ನಿನ್ನೆಯ ಭಾಷಣದವನ್ನು ಚಿದಂಬರಂ ಕೊಂಡಾಡಿದ್ದಾರೆ.
‘ಆರ್‌ಎಸ್‌ಎಸ್ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಣಬ್ ಮುಖರ್ಜಿ ಆಡಿದ ಮಾತುಗಳು ಸಂಘ ಪರಿವಾರಕ್ಕೆ ಛಾಟಿ ಏಟು ನೀಡಿದಂತಿತ್ತು’ ಎಂದು ಮಾಜಿ ಕೇಂದ್ರ ಸಚಿವ ಹಾಗೂ ಕಾಂಗ್ರೆಸ್ ಮುಖಂಡ ಪಿ.ಚಿದಂಬಂರಂ ಅಭಿಪ್ರಾಯಪಟ್ಟಿದ್ದಾರೆ. ಕಾಂಗ್ರೆಸ್ ಪಕ್ಷದ ಸಿದ್ಧಾಂತದಲ್ಲಿರುವ ಉತ್ತಮ ಅಂಶಗಳನ್ನು ಎತ್ತಿಹಿಡಿಯುವ ಮೂಲಕ, ಸಂಘದ ಸಿದ್ದಾಂತದಲ್ಲಿರುವ ದೋಷಗಳನ್ನು ಪ್ರಣಬ್ ತೋರಿಸಿಕೊಟ್ಟಿದ್ದಾರೆ ಎಂದು ಚಿದಂಬರಂ ಟ್ವೀಟ್ ಮಾಡಿದ್ದಾರೆ.
ಆರ್‌ಎಸ್‌ಎಸ್ ಕಾರ್ಯಕ್ರಮಕ್ಕೆ ಹೋಗುವ ಪ್ರಣಬ್ ನಿರ್ಧಾರಕ್ಕೆ ಎಲ್ಲಡೆ ಸಾಕಷ್ಟು ವಿರೋಧ ವ್ಯಕ್ತವಾಗಿತ್ತಾದರೂ, ಚಿದಂಬರಂ ಮಾತ್ರ ಅವರಿಗೆ ಬೆಂಬಲ ನೀಡಿದ್ದರು. ಅಲ್ಲದೆ ಆರ್‌ಎಸ್‌ಎಸ್ ಅವರಿಗೆ ಅವರ ತಪ್ಪೇನು ಎಂದು ತಿಳಿಸಿ ಎಂದು ಟ್ವೀಟ್ ಮಾಡುವ ಮೂಲಕ ಪ್ರಣಬ್‌ಗೆ ಬೆಂಬಲ ಸೂಚಿಸಿದ್ದನ್ನು ಇಲ್ಲಿ ಸ್ಮರಿಸಬಹುದು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.