
ನವದೆಹಲಿ(ಜೂ.1): ಐಎನ್ಎಕ್ಸ್ ಮೀಡಿಯಾ ಭ್ರಷ್ಟಾಚಾರ ಪ್ರಕರಣ ಸಂಬಂಧ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಅವರನ್ನು ಜೂನ್ 6ರಂದು ಸಿಬಿಐ ವಿಚಾರಣೆ ನಡೆಸಲಿದೆ. ಗುರುವಾರವಷ್ಟೇ ಈ ಪ್ರಕರಣದ ವಿಚಾರಣೆ ನಡೆಸಿದ್ದ ದೆಹಲಿ ಹೈಕೋರ್ಟ್, ಜುಲೈ 3ರವರೆಗೆ ಚಿದಂಬರಂ ಅವರನ್ನು ಬಂಧಿಸದಂತೆ ಆದೇಶ ನೀಡಿತ್ತು.
ಏರ್ ಸೆಲ್-ಮ್ಯಾಕ್ಸಿಸ್ 3,500 ಕೋಟಿ ರೂ. ಮತ್ತು ಐಎನ್ಎಕ್ಸ್ ಮೀಡಿಯಾ ಪ್ರಕರಣದಲ್ಲಿ 305 ಕೋಟಿ ರೂ.ಗಳ ಅಕ್ರಮ ವ್ಯವಹಾರದಲ್ಲಿ ಚಿದಂಬರಂ ಕೈವಾಡವಿರುವ ಶಂಕೆಯನ್ನು ಸಿಬಿಐ ವ್ಯಕ್ತಪಡಿಸಿತ್ತು.
ಯುಪಿಎ-1 ಅವಧಿಯಲ್ಲಿ ಹಣಕಾಸು ಸಚಿವರಾಗಿದ್ದ ಚಿದಂಬರಂ ಈ ಎರಡೂ ಸಂಸ್ಥೆಗಳಿಗೆ ಅನುಕೂಲವಾಗುವಂತೆ ವಿದೇಶೀ ಹೂಡಿಕೆ ಪ್ರಚಾರ ಮಂಡಳಿಗೆ ಅನುಮತಿ ನೀಡಿದ್ದರು ಎಂಬ ಆರೋಪವಿದೆ. ಐಎನ್ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಸಿಬಿಐ ಕಳೆದ ವರ್ಷ ಮೇ 15ರಂದು ಸಿಬಿಐ ಎಫ್ಐಆರ್ ದಾಖಲಿಸಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.