
ಮಂಡ್ಯ[ಅ.30]: ಮಂಡ್ಯ ಲೋಕಸಭಾ ಉಪಚುನಾವಣೆ ಮತದಾನ ನಡೆಯಲಿರುವ ಕ್ಷೇತ್ರಗಳ ವ್ಯಾಪ್ತಿಯಲ್ಲಿ ನೋಂದಾಯಿತರಾದ ಅರ್ಹ ಮತದಾರರಾಗಿರುವ ಎಲ್ಲಾ ಕಾರ್ಮಿಕರಿಗೆ ಮತ ಚಲಾಯಿಸಲು ಅನುಕೂಲವಾಗುವಂತೆ ಎಲ್ಲಾ ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು, ಕಾರ್ಖಾನೆಗಳು ಹಾಗೂ ಇತರೆ ಸಂಸ್ಥೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ 1962ರ ಕರ್ನಾಟಕ ಔದ್ಯೋಗಿಕ ಸಂಸ್ಥೆಗಳ ಕಾಯ್ದೆ ಹಾಗೂ 1951ರ ಪ್ರಜಾ ಪ್ರತಿನಿಧಿ ಕಾಯ್ದೆಯಡಿ ವೇತನ ಸಹಿತ ರಜೆ ಘೋಷಿಸಿದೆ.
ಚುನಾವಣೆ ನಡೆಯುವ ಕ್ಷೇತ್ರಗಳಲ್ಲಿ ಅರ್ಹ ಕಾರ್ಮಿಕರು ಮತ ಚಲಾಯಿಸಲು ಅನುಕೂಲವಾಗುವಂತೆ ಎಲ್ಲಾ ಕಾರ್ಖಾನೆಗಳು, ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು ಮತ್ತು ಇತರೆ ಸಂಸ್ಥೆಗಳ ಮಾಲೀಕರು ವೇತನ ಸಹಿತ ರಜೆ ನೀಡುವಂತೆ ಕಾರ್ಮಿಕ ಇಲಾಖೆ ಆಯುಕ್ತರು ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.