
ಮುಂಬೈ(ಜ.12): ಕಳೆದ ವರ್ಷದ ಸೆ.30ರಂದು ಆಕಸ್ಮಿಕವಾಗಿ ಗಡಿ ನಿಯಂತ್ರಣ ರೇಖೆ ದಾಟಿ ಹೋಗಿ ಪಾಕಿಸ್ತಾನ ಸೈನಿಕರ ವಶದಲ್ಲಿರುವ ಸೈನಿಕ ಚಂದು ಚವಾಣ್ ಶೀಘ್ರ ಬಿಡುಗಡೆಯಾಗಲಿದ್ದಾರೆ. ಈ ಬಗ್ಗೆ ಖಚಿತ ದಿನವನ್ನು ಇಷ್ಟರಲ್ಲೇ ಘೋಷಣೆ ಮಾಡಲಾಗುತ್ತದೆ ಎಂದು ಕೇಂದ್ರ ರಕ್ಷಣಾ ಖಾತೆ ಸಹಾಯಕ ಸಚಿವ ಸುಭಾಷ್ ಭಾಮ್ರೆ ಹೇಳಿದ್ದಾರೆ.
ಪಾಕಿಸ್ತಾನ ಅಧಿಕಾರಿಗಳು ಚಂದು ಚವಾಣ್ ಜೀವಂತವಾಗಿರುವುದನ್ನು ಖಚಿತಪಡಿಸಿದ್ದಾರೆ. ಸದ್ಯ ಅವರನ್ನು ವಿಚಾರಣೆಗೆ ಒಳಪಡಿಸಲಾಗುತ್ತಿದೆ ಎಂದು ನೆರೆಯ ದೇಶದ ಅಧಿಕಾರಿಗಳು ತಿಳಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಮುಂಬೈನಲ್ಲಿ ಮಾತನಾಡಿದ ಅವರು, ಸೇನಾ ಕಾರ್ಯಾಚರಣೆಗಳ ಮಹಾ ನಿರ್ದೇಶಕರ ಮಟ್ಟದಲ್ಲಿ ಹಲವು ಸುತ್ತಿನ ಮಾತುಕತೆ ನಡೆಸಲಾಗಿದೆ. ಎರಡು ದಿನಗಳ ಹಿಂದಷ್ಟೇ ಕೊನೆಯ ಮಾತುಕತೆ ನಡೆದಿತ್ತು ಎಂದು ಭಾಮ್ರೆ ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.