ಭಾರತ ಬೆಂಬಲಿಸುವ ದೇಶದ ಮೇಲೆ ಮಿಸೈಲ್ ದಾಳಿ: ಪಾಕ್ ಮಿನಿಸ್ಟರ್ ಜೋಕ್ ಆಫ್ ದಿ ಡೇ ಕೇಳಿ!

Published : Oct 30, 2019, 12:10 PM ISTUpdated : Oct 30, 2019, 05:02 PM IST
ಭಾರತ ಬೆಂಬಲಿಸುವ ದೇಶದ ಮೇಲೆ ಮಿಸೈಲ್ ದಾಳಿ: ಪಾಕ್ ಮಿನಿಸ್ಟರ್ ಜೋಕ್ ಆಫ್ ದಿ ಡೇ ಕೇಳಿ!

ಸಾರಾಂಶ

ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದುಗೊಳಿಸಿರುವ ಭಾರತ| ವಿಶ್ವ ವೇದಿಕೆಯಲ್ಲಿ ತನ್ನ ಕ್ರಮವನ್ನು ಸಮರ್ಥಿಸಿಕೊಳ್ಳುವತ್ತ ದೃಷ್ಟಿ ನೆಟ್ಟಿರುವ ಭಾರತ| ವಿಶೇಷ ಸ್ಥಾನಮಾನದ ರದ್ದತಿಯಿಂದಾಗಿ ಕಂಗಾಲಾಗಿರುವ ಪಾಕಿಸ್ತಾನ| ಬಾಯಿಗೆ ಬಂದಂತೆ ಮಾತನಾಡುತ್ತಿರುವ ಪಾಕ್ ನಾಯಕರು| 'ಕಾಶ್ಮೀರ ವಿಚಾರವಾಗಿ ಭಾರತಕ್ಕೆ ಬೆಂಬಲ ನೀಡುತ್ತಿರುವ ರಾಷ್ಟ್ರಗಳ ವಿರುದ್ಧ ಮಿಸೈಲ್ ದಾಳಿ'| ಪಾಕಿಸ್ತಾನ ಸಚಿವ ಅಮಿನ್ ಗಂಡಾಪುರ್ ಹಾಸ್ಯಾಸ್ಪದ ಹೇಳಿಕೆ| 'ಭಾರತವನ್ನು ಬೆಂಬಲಿಸುತ್ತಿರುವ ರಾಷ್ಟ್ರಗಳನ್ನು ನಾವು ಶತ್ರುಗಳು ಎಂದು ಪರಿಗಣಿಸುತ್ತೇವೆ'| ಕಣಿವೆಯಲ್ಲಿ ಭಾರತ ಉದ್ಧಟತನ ತೋರಿದರೆ ಯುದ್ಧ ಸಾರುವುದಾಗಿ ಹೇಳಿದ ಅಮಿನ್ ಗಂಡಾಪುರ್|

ಇಸ್ಲಾಮಾಬಾದ್(ಅ.30): ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದುಗೊಳಿಸಿರುವ ಭಾರತ, ವಿಶ್ವ ವೇದಿಕೆಯಲ್ಲಿ ತನ್ನ ಕ್ರಮವನ್ನು ಸಮರ್ಥಿಸಿಕೊಳ್ಳುವತ್ತ ದೃಷ್ಟಿ ನೆಟ್ಟಿದೆ. ಆದರೆ ವಿಶೇಷ ಸ್ಥಾನಮಾನದ ರದ್ದತಿಯಿಂದಾಗಿ ಕಂಗಾಲಾಗಿರುವ ಪಾಕಿಸ್ತಾನ ಮಾತ್ರ ಬಾಯಿಗೆ ಬಂದಂತೆ ಮಾತನಾಡುತ್ತಾ ವಿಶ್ವದ ಮುಂದೆ ನಗೆಪಾಟಲಿಗಿಡಾಗುತ್ತಿದೆ.

ಅದರಂತೆ ಕಾಶ್ಮೀರ ವಿಚಾರವಾಗಿ ಭಾರತಕ್ಕೆ ಬೆಂಬಲ ನೀಡುತ್ತಿರುವ ರಾಷ್ಟ್ರಗಳ ವಿರುದ್ಧ ಮಿಸೈಲ್ ದಾಳಿ ಮಾಡುವುದಾಗಿ ಪಾಕಿಸ್ತಾನ ಸಚಿವ ಅಮಿನ್ ಗಂಡಾಪುರ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಕಾಶ್ಮೀರ ವಿಚಾರವಾಗಿ ಪಾಕ್‌ಗೆ ಬೆಂಬಲ: ಈ ದೇಶದ ಪ್ರವಾಸ ರದ್ದುಗೊಳಿಸಿದ ಮೋದಿ!

ಭಾರತಕ್ಕೆ ಬೆಂಬಲ ನೀಡುತ್ತಿರುವ ರಾಷ್ಟ್ರಗಳ ವಿರುದ್ಧ ಕ್ಷಿಪಣಿ ದಾಳಿ ಮಾಡಲಾಗುವುದು ಎಂದು ಕಾಶ್ಮೀರ ವ್ಯವಹಾರ ಮತ್ತು ಗಿಲ್ಗಿಟ್ ಬಾಲ್ಟಿಸ್ತಾನ್ ಉಸ್ತುವಾರಿ ಸಚಿವ ಗಂಡಾಪುರ್ ಹಾಸ್ಯಾಸ್ಪದ ಹೇಳಿಕೆ ನೀಡಿದ್ದಾರೆ.

ಕಾಶ್ಮೀರ ವಿಚಾರವಾಗಿ ಭಾರತವನ್ನು ಬೆಂಬಲಿಸುತ್ತಿರುವ ರಾಷ್ಟ್ರಗಳನ್ನು ನಾವು ಶತ್ರುಗಳು ಎಂದು ಪರಿಗಣಿಸುತ್ತೇವೆ. ಕಣಿವೆಯಲ್ಲಿ ಭಾರತವೇನಾದರೂ ಉದ್ಧಟತನ ತೋರಿ ಪರಿಸ್ಥಿತಿ ಕೈ ಮೀರುವ ಪರಿಸ್ಥಿತಿ ಬಂದರೆ, ಪಾಕಿಸ್ತಾನ ಯುದ್ಧವನ್ನು ಸಾರಲಿದೆ ಎಂದು ಗಂಡಾಪುರ್ ಮನಬಂದಂತೆ ಮಾತನಾಡಿದ್ದಾರೆ.

ಜಾಗತಿಕ ವೇದಿಕೆಯಲ್ಲಿ ಪಾಕಿಸ್ತಾನದ ಮಾನ ಹರಾಜು ಹಾಕಿದ ಶಶಿ ತರೂರ್!

ಅಲ್ಲದೆ ಭಾರತ ಮತ್ತು ಅದಕ್ಕೆ ಬೆಂಬಲ ನೀಡುವ ರಾಷ್ಟ್ರಗಳ ಮೇಲೆ ಕ್ಷಿಪಣಿ ದಾಳಿ ಮಾಡಲಾಗುವುದು ಎಂದು ಹೇಳಿರುವ ಅಮಿನ್ ವಿಡಿಯೋವನ್ನು ಪತ್ರಕರ್ತೆ ನೈಲಾ ಇನಾಯತ್ ತಮ್ಮ ಟ್ವಿಟರ್ ಖಾತೆಯಲ್ಲಿ ಶೇರ್ ಮಾಡಿದ್ದಾರೆ.

ಆ 58 ರಾಷ್ಟ್ರಗಳ ಹೆಸರೇಳಿ ಸ್ವಾಮಿ: ಪ್ರಶ್ನೆಗೆ ತಾಳ್ಮೆ ಕಳೆದುಕೊಂಡ ಪಾಕ್ ಆಸಾಮಿ!

ಕಣಿವೆಯಲ್ಲಿ ನಡೆಯುತ್ತಿರುವುದು ಧರ್ಮಯುದ್ಧ: ಇಮ್ರಾನ್ ಇವಾಗ ತೆಪ್ಪಗಿದ್ದರೆ ಚೆಂದ!

ಅಕ್ಟೋಬರ್ 30ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ:

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ನಾನು ಲಂಚ ಪಡೆದಿದ್ದು ಸಾಬೀತಾದರೆ ರಾಜೀನಾಮೆ: ಗೃಹ ಸಚಿವ ಪರಮೇಶ್ವರ್‌
ದಲಿತ ಸಮುದಾಯಕ್ಕೆ ಸಿಎಂ ಹುದ್ದೆ ಕೊಡಿ ಎಂದು ಸಮಯ ಬಂದಾಗ ಕೇಳುವೆ: ಸಚಿವ ಮಹದೇವಪ್ಪ