
ಶ್ರೀನಗರ(ಜುಲೈ 12): ಎರಡು ದಿನಗಳ ಹಿಂದೆ ಅಮರನಾಥ ಯಾತ್ರಿಕರ ಮೇಲೆ ಉಗ್ರರು ದಾಳಿ ನಡೆಸಿದ ನರಮೇಧ ಮಾಡಿದ ಘಟನೆ ಬೆನ್ನಲ್ಲೇ ಪಾಕಿಸ್ತಾನದ ಸೈನಿಕರು ಅಟ್ಟಹಾಸ ಮೆರೆದಿದ್ದಾರೆ. ಕುಪ್ವಾರಾದಲ್ಲಿ ಪಾಕ್ ಸೈನಿಕರು ಕದನ ವಿರಾಮ ಉಲ್ಲಂಘಿಸಿ ಇಬ್ಬರು ಭಾರತೀಯ ಸೈನಿಕರನ್ನು ಹತ್ಯೆ ಮಾಡಿದ್ದಾರೆ.
ಗಡಿ ನಿಯಂತ್ರಣ ರೇಖೆ ದಾಟಿ ಬಂದ ಪಾಕಿಸ್ತಾನೀಯರು ಭಾರತೀಯ ಸೇನಾ ತುಕಡಿಯೊಂದರ ಮೇಲೆ ಅಪ್ರಚೋಚಿತ ಗುಂಡಿನ ದಾಳಿ ನಡೆಸಿದರು. ಈ ಗುಂಡಿನ ದಾಳಿಯಲ್ಲಿ ಇಬ್ಬರು ಯೋಧರು ಹುತಾತ್ಮರಾದರು.
ಇದೇ ವೇಳೆ, ಮೊನ್ನೆ ಅಮರನಾಥ ಯಾತ್ರಿಕರ ಮೇಲೆ ಉಗ್ರರು ದಾಳಿ ನಡೆಸಿದ ಘಟನೆಯ ಪ್ರಮುಖ ಮಾಸ್ಟರ್'ಮೈಂಡ್ ಎನ್ನಲಾದ ಲಷ್ಕರೆ ಉಗ್ರ ಮೊಹಮ್ಮದ್ ಇಸ್ಮಾಯಿಲ್ ಅಲಿಯಾಸ್ ಅಬುಲ್ ಇಸ್ಮಾಯಿಲ್'ನನ್ನು ಹಿಡಿಯಲು ಭದ್ರತಾ ಪಡೆಗಳು ಬಹಳಷ್ಟು ಬಲೆ ಬೀಸಿವೆ. ದಕ್ಷಿಣ ಕಾಶ್ಮೀರದಲ್ಲಿ ಹೆಚ್ಚೂಕಡಿಮೆ ನಾಕಾಬಂಧಿ ಹಾಕಲಾಗಿದೆ. ಲಷ್ಕರೆ ಸಂಘಟನೆಯ ಭವಿಷ್ಯದ ನಾಯಕನೆಂದು ಕರೆಯಲಾಗುತ್ತಿರುವ ಅಬುಲ್ ಇಸ್ಮಾಯಿಲ್ ಸಿಕ್ಕಿಬೀಳುವುದು ಖಚಿತವೆನ್ನಲಾಗುತ್ತಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.