
ಇಸ್ಲಾಮಾಬಾದ್ (ಮಾ.11): ಅಜ್ಮೀರ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಶಂಕಿತ ಉಗ್ರ ಸ್ವಾಮಿ ಅಸೀಮಾನಂದನನ್ನು ಖುಲಾಸೆಗೊಳಿಸಿದ ಹಿನ್ನಲೆಯಲ್ಲಿ ಪಾಕಿಸ್ತಾನವು ಭಾರತೀಯ ಡೆಪ್ಯುಟಿ ಹೈಕಮಿಷನರ್ ಜೆ.ಪಿ.ಸಿಂಗ್ ಅವರನ್ನು ಸಮನ್ಸ್ ಮಾಡಿದೆ.
ಅಸೀಮಾನಂದನನ್ನು ಖುಲಾಸೆ ಮಾಡಿರುವ ಬಗ್ಗೆ ಪಾಕಿಸ್ತಾನವು ತನ್ನ ಬಲವಾದ ಆಕ್ಷೇಪವನ್ನು ಜೆ.ಪಿ.ಸಿಂಗ್ ಅವರ ಮುಂದಿರಿಸಿದೆ ಎಂದು ವರದಿಯಾಗಿದೆ.
2007ರಲ್ಲಿ ಅಜ್ಮೀರ್’ನಲ್ಲಿ ನಡೆದ ಭಯೋತ್ಪಾದನಾ ಕೃತ್ಯ ಪ್ರಕರಣದಲ್ಲಿ ಅಸೀಮಾನಂದನಿಗೆ ರಾಷ್ಟ್ರೀಯ ತನಿಖಾ ದಳ (ಎನ್’ಐಏ) ನ್ಯಾಯಾಲಯವು ಇತ್ತೀಚೆಗೆ ಖುಲಾಸೆಗೊಳಿಸಿದೆ. ಖ್ವಾಜಾ ಮುಹಿಯುದ್ದೀನ್ ಚಿಶ್ತಿ ದರ್ಗಾದಲ್ಲಿ ನಡೆದ ಬಾಂಬ್ ಸ್ಫೋಟದಲ್ಲಿ ಮೂವರು ಮೃತಪಟ್ಟಿದ್ದು, 17 ಮಂದಿ ಗಾಯಗೊಂಡಿದ್ದರು.
ಹೈದರಾಬಾದ್ ಮಕ್ಕಾ ಮಸೀದಿ ಬಾಂಬ್ ಸ್ಫೋಟ ಸೇರಿದಂತೆ, ಇತರ ಭಯೋತ್ಪಾದನಾ ಪ್ರಕರಣಗಳಲ್ಲಿಯೂ ಅಸೀಮಾನಂದ ಆರೋಪಿಯಾಗಿದ್ದು, ವಿಚಾರಣೆ ಎದುರಿಸುತ್ತಿದ್ದಾನೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.