ಕರ್ತಾರ್‌ಪುರಕ್ಕೆ ಬರಲು ಸಿಂಗ್‌ ಒಪ್ಪಿದ್ದಾರೆ: ಪಾಕ್‌

By Web DeskFirst Published Oct 20, 2019, 8:50 AM IST
Highlights

ಕರ್ತಾರ್‌ಪುರಕ್ಕೆ ಬರಲು ಸಿಂಗ್‌ ಒಪ್ಪಿದ್ದಾರೆ|  ಪಾಕಿಸ್ತಾನ ವಿದೇಶಾಂಗ ಸಚಿವ ಶಾ ಮೆಹಮೂದ್‌ ಖುರೇಷಿ ಹೇಳಿಕೆ

ನವದೆಹಲಿ[ಅ.20]: ನ.9ರಂದು ಕರ್ತಾರ್‌ಪುರ ಕಾರಿಡಾರ್‌ ಉದ್ಘಾಟನೆಯ ಬಳಿಕ ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಒಬ್ಬ ಸಾಮಾನ್ಯ ವ್ಯಕ್ತಿಯಾಗಿ ಕರ್ತಾರ್‌ಪುರ ಸಾಹಿಬ್‌ ಗುರುದ್ವಾರಕ್ಕೆ ಭೇಟಿ ನೀಡಲಿದ್ದಾರೆ ಎಂದು ಪಾಕಿಸ್ತಾನ ವಿದೇಶಾಂಗ ಸಚಿವ ಶಾ ಮೆಹಮೂದ್‌ ಖುರೇಷಿ ಶನಿವಾರ ಹೇಳಿದ್ದಾರೆ.

ಕರ್ತಾರ್‌ಪುರ ಉದ್ಘಾಟನೆಗೆ ಸಿಂಗ್‌ಗೆ ಇಮ್ರಾನ್‌ ಅಧಿಕೃತ ಆಹ್ವಾನ!

ಮುಲ್ತಾನ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಖುರೇಷಿ, ‘ನಾನು ಮನಮೋಹನ್‌ ಸಿಂಗ್‌ ಅವರಿಗೆ ಆಹ್ವಾನ ನೀಡಿದ್ದೆ. ಈ ಆಹ್ವಾನವನ್ನು ಒಪ್ಪಿ ಪತ್ರ ಬರೆದಿರುವ ಮನಮೋಹನ್‌ ಸಿಂಗ್‌, ಮುಖ್ಯ ಅತಿಥಿಯ ಬದಲು ಸಾಮಾನ್ಯ ವ್ಯಕ್ತಿಯಾಗಿ ಗುರುದ್ವಾರಕ್ಕೆ ಭೇಟಿ ನೀಡುತ್ತಿರುವುದಾಗಿ ತಿಳಿಸಿದ್ದಾರೆ. ಸಾಮಾನ್ಯ ವ್ಯಕ್ತಿಯಾಗಿ ಬಂದರೂ ನಾವು ಅವರನ್ನು ಸ್ವಾಗತಿಸುತ್ತೇವೆ’ ಎಂದು ಹೇಳಿದ್ದಾರೆ.

ಕರ್ತಾರ್‌ಪುರ ಕಾರಿಡಾರ್ ಉದ್ಘಾಟನೆ: ಪಾಕ್ ಆಹ್ವಾನ ತಿರಸ್ಕರಿಸಿದ ಸಿಂಗ್!

ಶಿಷ್ಟಾಚಾರದಂತೆ ಕರ್ತಾರ್‌ಪುರ ಕಾರಿಡಾರ್‌ ಉದ್ಘಾಟನೆಗೆ ಪಾಕಿಸ್ತಾನ ಭಾರತದ ಪ್ರಧಾನಿ ನರೇಂದ್ರ ಮೋದಿಗೆ ಆಹ್ವಾನ ನೀಡುವ ಬದಲು, ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಅವರನ್ನು ಆಹ್ವಾನಿಸಿದ್ದು ವಿವಾದಕ್ಕೆ ಕಾರಣವಾಗಿತ್ತು.

click me!