
ಜಿನೆವಾ(ಸೆ.10):Truth Comes First ಅಂತಾರೆ. ಈ ಮಾತು ಅದೆಷ್ಟು ಸತ್ಯ ಎಂಬುದನ್ನು ಪಾಕ್ ವಿದೇಶಾಂಗ ಸಚಿವ ಸಾಬೀತುಪಡಿಸಿದ್ದಾರೆ.
ಜಿನೆವಾಗೆ ತೆರಳಿದ್ದ ಪಾಕ್ ವಿದೇಶಾಂಗ ಸಚಿವ ಶಾ ಮೆಹಮೂದ್ ಖುರೇಷಿ, ಕಾಶ್ಮೀರವನ್ನು ಭಾರತದ ಅವಿಭಾಜ್ಯ ಅಂಗ ಎಂದು ಹೇಳುವ ಮೂಲಕ ಜಗತ್ತಿನ ಮುಂದೆ ಸತ್ಯ ನುಡಿದಿದ್ದಾರೆ.
ಜಿನೆವಾದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಖುರೇಷಿ, ಜಮ್ಮು ಮತ್ತು ಕಾಶ್ಮೀರದಲ್ಲಿ ನಿಷೇಧಾಜ್ಞೆ ಹಿಂಪಡೆಯುವ ಮೂಲಕ ಪರಿಸ್ಥಿತಿ ಶಾಂತವಾಗಿದೆ ಎಂದು ನಾಟಕವಾಡುತ್ತಿದೆ ಎಂದು ಹರಿಹಾಯ್ದಿದ್ದಾರೆ. ಕಾಶ್ಮೀರದಲ್ಲಿ ನಿಜಕ್ಕೂ ಪರಿಸ್ಥಿತಿ ಸಹಜವಾಗಿದ್ದರೆ, ಅಂತಾರಾಷ್ಟ್ರೀಯ ಮಾಧ್ಯಮ, ಸಂಘ ಸಂಸ್ಥೆಗಳಿಗೆ ಕಾಶ್ಮೀರ ಭೇಟಿಗೆ ಅವಕಾಶ ಏಕೆ ನೀಡುತ್ತಿಲ್ಲ ಎಂದು ಖುರೇಷಿ ಪ್ರಶ್ನಿಸಿದ್ದಾರೆ.
ಆದರೆ ಜಮ್ಮು ಮತ್ತು ಮತ್ತು ಕಾಶ್ಮೀರವನ್ನು ಭಾರತ ಆಕ್ರಮಿತ ಕಾಶ್ಮೀರ(IOK) ಎಂದೇ ಕರೆಯುತ್ತಿದ್ದ ಪಾಕ್ ನಾಯಕರು, ಇದೀಗ ಕಾಶ್ಮೀರ ಭೂಭಾಗ ಭಾರತಕ್ಕೆ ಸೇರಿದ್ದು ಎಂದು ಸತ್ಯ ಒಪ್ಪಿಕೊಳ್ಳುತ್ತಿದ್ದಾರೆ.
ಪತ್ರಕರ್ತರೊಂದಿಗೆ ಮಾತನಾಡುತ್ತಿದ್ದ ಖುರೇಷಿ, ‘ಇಂಡಿಯನ್ ಸ್ಟೇಟ್ ಆಫ್ ಕಾಶ್ಮೀರ್’ ಎಂದು ಹೇಳುವ ಮೂಲಕ ಕಾಶ್ಮೀರ ಭಾರತಕ್ಕೆ ಸೇರಿದ್ದು ಎಂದು ಪರೋಕ್ಷವಾಗಿ ಒಪ್ಪಿಕೊಂಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.