
ಇಸ್ಲಾಮಾಬಾದ್(ಜು.28): ಕಾಶ್ಮೀರ ವಿವಾದ ಇತ್ಯರ್ಥಕ್ಕೆ ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಪ್ರಸ್ತಾವನೆ ತನ್ನ ನಿರೀಕ್ಷೆಗಿಂತ ಹೆಚ್ವಾಗಿದೆ ಎಂದು ಪಾಕಿಸ್ತಾನ ಅಭಿಪ್ರಾಯಪಟ್ಟಿದೆ.
ಈ ಕುರಿತು ಮಾತನಾಡಿರುವ ಪಾಕಿಸ್ತಾನದ ವಿದೇಶಾಂಗ ವ್ಯವಹಾರಗಳ ಸಚಿವ ಶಾ ಮಹಮ್ಮೂದ್ ಖುರೇಷಿ, ಕಾಶ್ಮೀರ ವಿವಾದ ಭಾರತ-ಪಾಕ್ ನಡುವಿನ ವೈಷಮ್ಯಕ್ಕೆ ಕಾರಣವಾಗಿದ್ದು, ಅಮೆರಿಕದ ಮಧ್ಯಪ್ರವೇಶದಿಂದ ಶೀಘ್ರ ಇತ್ಯರ್ಥವಾಗುವ ಭರವಸೆ ಇದೆ ಎಂದು ಹೇಳಿದ್ದಾರೆ.
ಕಾಶ್ಮೀರ ವಿವಾದದ ಗಂಭೀರತೆಯನ್ನು ಅಮೆರಿಕ ಅಧ್ಯಕ್ಷರಿಗೆ ಮನವರಿಕೆ ಮಾಡಿಕೊಡುವಲ್ಲಿ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಯಶಸ್ವಿಯಾಗಿದ್ದು, ಅದರಂತೆ ಅಮೆರಿಕದ ಮಧ್ಯಸ್ಥಿಕೆಯಲ್ಲೇ ವಿವಾದ ಬಗೆಹರಿಯಲಿದೆ ಎಂದು ಖುರೇಷಿ ಭರವಸೆ ವ್ಯಕ್ತಪಡಿಸಿದ್ದಾರೆ.
ಕಾಶ್ಮೀರ ವಿವಾದ ಭಾರತದ ಹಠಮಾರಿ ಧೋರಣೆಯಿಂದ ಮತ್ತಷ್ಟು ಜಟಿಲವಾಗುತ್ತಿದ್ದು, ಕಣಿವೆಯಲ್ಲಿ ದಿನದಿಂದ ದಿನಕ್ಕೆ ಅಲ್ಲಿನ ಪರಿಸ್ಥಿತಿ ಹದಗೆಡುತ್ತಿದೆ ಎಂದು ಖುರೇಷಿ ಆರೋಪಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.