
ಮುಂಬೈ(ಸೆ.20): ಉರಿ ಸೆಕ್ಟರ್ ಮೇಲಿನ ಉಗ್ರ ದಾಳಿ ಬೆನ್ನಲ್ಲೇ ಪಾಕಿಸ್ತಾನ ಮತ್ತು ಭಾರತ ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣಗೊಂಡಿದ್ದು, ಇದಕ್ಕೆ ತುಪ್ಪ ಸುರಿಯುವ ಕೆಲಸವೊಂದನ್ನು ಪಾಕ್ ವಿದೇಶಾಂಗ ಕಾರ್ಯದರ್ಶಿ ಎಜಾಜ್ ಅಹ್ಮದ್ ಚೌಧರಿ ಮಾಡಿದ್ದಾರೆ.
ನ್ಯೂಯಾರ್ಕ್ ರೂಸ್ ವೆಲ್ಟ್ ಹೋಟೆಲ್ ನಲ್ಲಿ ಏರ್ಪಡಿಸಲಾಗಿದ್ದ ವಿಶ್ವಸಂಸ್ಥೆ ಸಾಮಾನ್ಯ ಸಭೆಯ ಸುದ್ದಿಗೋಷ್ಠಿಯಿಂದ ಭಾರತೀಯ ಪತ್ರಕರ್ತೆಯೊಬ್ಬರನ್ನು ಪಾಕ್ ವಿದೇಶಾಂಗ ಕಾರ್ಯದರ್ಶಿ ಎಜಾಜ್ ಅಹ್ಮದ್ ಚೌದರಿ ಹೊರ ಕಳುಹಿಸಿದ್ದಾರೆ. ಎನ್ ಡಿಟಿವಿ ಸುದ್ದಿವಾಹಿನಿಯ ಪತ್ರಕರ್ತೆಯನ್ನು ಸುದ್ದಿಗೋಷ್ಠಿಯಿಂದ ಹೊರಗಟ್ಟಲಾಗಿದ್ದು, ಕೇವಲ ಅವರು ಮಾತ್ರವವಲ್ಲದೇ ಎಜಾಜ್ ಅಹ್ಮದ್ ಚೌದರಿ ಅವರ ಸುದ್ದಿಗೋಷ್ಠಿಯಲ್ಲಿ ಯಾವೊಬ್ಬ ಭಾರತೀಯ ಪತ್ರಕರ್ತನೂ ಪಾಲ್ಗೊಳ್ಳುದಂತೆ ನೋಡಿಕೊಳ್ಳಲಾಗಿದೆ. ಪಾಕ್ ವಿದೇಶಾಂಗ ಕಾರ್ಯದರ್ಶಿ ಚೌದರಿ ಅವರ ಈ ಕ್ರಮಕ್ಕೆ ಇದೀಗ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದ್ದು, ಭಾರತೀಯ ಪತ್ರಕರ್ತರು ಚೌದರಿ ನಡೆಯನ್ನು ಕಟು ಶಬ್ದಗಳಿಂದ ಟೀಕಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಭಾರತೀಯ ಪತ್ರಕರ್ತರು ಉರಿ ಉಗ್ರ ದಾಳಿ ಕುರಿತಾದ ಪ್ರಶ್ನೆಗಳನ್ನು ಕೇಳುತ್ತಾರೆ ಎಂಬ ಭೀತಿಯಲ್ಲಿ ಭಾರತೀಯ ಪತ್ರಕರ್ತರನ್ನು ಸುದ್ದಿಗೋಷ್ಠಿಯಿಂದ ಹೊರಗಿಡಲಾಗಿದೆ ಎಂದು ಹೇಳಲಾಗುತ್ತಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.