
ಲಾಹೋರ್ [ಜು.18]: ಕರ್ತಾರ್‌ಪುರ ಗುರುದ್ವಾರಕ್ಕೆ ಪಾಕಿಸ್ತಾನ 42 ಎಕರೆ ಭೂಮಿಯನ್ನು ನೀಡುವುದಾಗಿ ಪಾಕಿಸ್ತಾನ ಹೇಳಿದೆ.
ಈ ಕುರಿತು ಹೇಳಿಕೆ ನೀಡಿರುವ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಗವರ್ನರ್ ಚೌಧರಿ ಮುಹಮ್ಮದ್ ಸರ್ವಾರ್, ಗುರುದ್ವಾರಕ್ಕೆ ಆಗಮಿಸುವ ಭಕ್ತರ ಅನುಕೂಲಕ್ಕಾಗಿ ಈ ಹಿಂದೆ ಘೋಷಿಸಿದ್ದ 3 ಎಕರೆ ಭೂಮಿಯ ಬದಲಾಗಿ 42 ಎಕರೆ ಭೂಮಿಯನ್ನು ನೀಡಲು ನಿರ್ಧರಿಸಲಾಗಿದೆ. ಆದರೆ ಈ ಜಾಗದಲ್ಲಿ ಯಾವುದೇ ನಿರ್ಮಾಣ ಕಾರ್ಯ ಕೈಗೊಳ್ಳುವಂತಿಲ್ಲ.
ಈ ಜಾಗದಲ್ಲಿ ಕೃಷಿ ಚಟುವಟಿಕೆಗಳನ್ನು ಮಾತ್ರ ನಡೆಸಬಹುದಾಗಿದೆ ಎಂದು ಹೇಳಿದ್ದಾರೆ. ಇದರೊಂದಿಗೆ ಕರ್ತಾರ್‌ಪುರದಲ್ಲಿ ಗುರುದ್ವಾರಕ್ಕೆ ಒಟ್ಟಾರೆ 104 ಎಕರೆ ಜಾಗ ನೀಡಿದಂತಾಗಿದೆ ಎಂದು ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.