ಪುಲ್ವಾಮಾ ದಾಳಿ: ಭಾರತದಿಂದ ಪಾಕಿಸ್ತಾನ ಹೈಕಮಿಷನರ್ ಪಲಾಯನ

Published : Feb 18, 2019, 08:09 PM IST
ಪುಲ್ವಾಮಾ ದಾಳಿ: ಭಾರತದಿಂದ ಪಾಕಿಸ್ತಾನ ಹೈಕಮಿಷನರ್ ಪಲಾಯನ

ಸಾರಾಂಶ

ಪುಲ್ವಮಾ ದಾಳಿ ಬಳಿಕ ಭಾರತ ಮತ್ತು ಪಾಕಿಸ್ತಾನ ನಡುವಿನ ರಾಜತಾಂತ್ರಿಕ ಸಂಬಂಧ ಹಳಸಿದ್ದು, ಪಾಕಿಸ್ತಾನ ದೆಹಲಿಯಲ್ಲಿರುವ ತನ್ನ ಹೈಕಮಿಷನರ್ ಅನ್ನು  ವಾಪಸ್ ಕರೆಸಿಕೊಂಡಿದೆ.

ನವದೆಹಲಿ, [ಫೆ.18]: ಪುಲ್ವಾಮಾ ಭಯೋತ್ಪಾದನಾ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನ ನಡುವೆ ಮಹತ್ವದ ಬೆಳವಣಿಗೆಗಳು ನಡೆಯುತ್ತಿವೆ.

ಪಾಕ್ ನೊಂದಿಗೆ ಭಾರತ ದ್ವಿಪಕ್ಷೀಯ ಮಾತುಕತೆಯನ್ನು ಮುರಿದುಕೊಂಡಿದೆ. ಅಷ್ಟೇ ಅಲ್ಲದೇ ಪಾಕ್ ಮೇಲಿನ ವಸ್ತುಗಳ ಮೇಲಿನ ತೆರಿಗೆಯನ್ನು ಹೆಚ್ಚಿಸಿದೆ. ಈ ಮೂಲಕ ಪಾಕಿಸ್ತಾನವನ್ನು ಆರ್ಥಿಕ ದಿವಾಳಿತನ ಮಾಡಲು ಪಣತೊಟ್ಟಿದೆ.

ಮೋದಿ ದಿಟ್ಟ ಕ್ರಮ, ಹುರಿಯತ್ ನಾಯಕರಿಗೆ ನೀಡಿದ್ದ ಭದ್ರತೆ ವಾಪಸ್

ಇನ್ನು ಇಸ್ಲಾಮಾಬಾದ್ ನಲ್ಲಿನ ತನ್ನ ರಾಯಭಾರಿಯನ್ನು ಹಿಂದಿರುಗುವಂತೆ ಭಾರತ ಹೇಳಿತ್ತು. ಇದರ ಬೆನ್ನಲ್ಲೇ ಪಾಕ್, ದೆಹಲಿಯಲ್ಲಿರುವ ತನ್ನ ಹೈಕಮಿಷನರ್ ಅನ್ನು  ವಾಪಸ್ ಕರೆಸಿಕೊಂಡಿದೆ.

ದೆಹಲಿಯಲ್ಲಿದ್ದ ಪಾಕಿಸ್ತಾನದ ರಾಯಭಾರಿ ಸೊಹೈಲ್ ಮಹಮೂದ್ ನವದೆಹಲಿಯಿಂದ ಸೋಮವಾರ ಪಾಕಿಸ್ತಾನಕ್ಕೆ ಮರಳುತ್ತಿದ್ದಾರೆ ಎಂದು ಪಾಕ್ ವಿದೇಶಾಂಗ ಕಛೇರಿಯ  ವಕ್ತಾರ ಮೊಹಮ್ಮದ್ ಫೈಸಲ್ ತಿಳಿಸಿದ್ದಾರೆ.

ಫೆ.14ರಂದು ಪುಲ್ವಾಮನಲ್ಲಿ ನಡೆದ ಉಗ್ರರ ದಾಳಿಯ ಬಳಿಕ ಭಾರತ ಮತ್ತು ಪಾಕಿಸ್ತಾನದ ಸಂಬಂಧ ಹಳಸಿದೆ. ರಾಜತಾಂತ್ರಿಕವಾಗಿ ಪಾಕ್‌ ಜೊತೆಗಿನ ಎಲ್ಲಾ ಮಾತುಕತೆಗಳನ್ನು ಭಾರತ ಸ್ಥಗಿತಗೊಳಿಸಿದೆ. ಸೋಮವಾರ ಭಾರತದಿಂದ ರಾಯಭಾರಿ ವಾಪಸ್ ಕರೆಸಿಕೊಂಡಿರುವ  ಪಾಕಿಸ್ತಾನದ ನಡೆ ಕುತೂಹಲ ಮೂಡಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಎಐ ನಿರ್ಮಾತೃಗಳಿಗೆ 2025ರ ಟೈಮ್ ವರ್ಷದ ವ್ಯಕ್ತಿ ಗೌರವ!
ಆರೋಪ ಸಾಬೀತು : ಪಾಕ್‌ ಐಎಸ್‌ಐ ಮಾಜಿ ಮುಖ್ಯಸ್ಥ ಹಮೀದ್‌ಗೆ 14 ವರ್ಷ ಜೈಲು