
ಇಸ್ಲಾಮಾಬಾದ್/ಪೇಶಾವರ(ಡಿ.7): ಪಾಕ್'ನಲ್ಲಿ ವಿಮಾನ ಅಪಘಾತಕ್ಕೀಡಾಗಿ ಇಸ್ಲಾಮಿಕ್ ಪಾಪ್ ಗಾಯಕ ಜುನೈದ್ ಜೇಮ್ಶದ್, ಮೂವರು ವಿದೇಶಿ ಪ್ರಜೆಗಳು ಸೇರಿದಂತೆ 48 ಮಂದಿ ಮೃತಪಟ್ಟಿದ್ದಾರೆ.ಅಬ್ಬೋಟಾಬಾದ್ ಬಳಿಯ ಅರಣ್ಯ ಪ್ರದೇಶದಲ್ಲಿ ಇಂಜಿನ್'ನಲ್ಲಿ ಸಮಸ್ಯೆ ಕಾಣಿಸಿಕೊಂಡು ಈ ದುರಂತ ಸಂಭವಿಸಿದೆ. ಪಾಕಿಸ್ತಾನದ ಅಂತರರಾಷ್ಟ್ರೀಯ ಏರ್'ಲೈನ್ಸ್'ನ ಪಿಕೆ-661 ವಿಮಾನ ಅಪಘಾತಕ್ಕೀಡಾದ ವಿಮಾನ. ವಿಮಾನದಲ್ಲಿದ್ದ ಎಲ್ಲ 48 ಮಂದಿ ಸಾವಿಗೀಡಾಗಿದ್ದಾರೆ. ಅಪಘಾತವಾದ ಪ್ರದೇಶದಲ್ಲಿ ಇಲ್ಲಿಯವರೆಗೂ 21 ಮೃತದೇಹಗಳನ್ನು ಹೊರತೆಗೆಯಲಾಗಿದೆ ಎಂದು ಸೇನೆಯ ಮೂಲಗಳು ತಿಳಿಸಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.