ದಾವೂದ್ ಭಾರತಕ್ಕೆ ಬರ್ತೀನಿ ಅಂದ್ರೂ ಐಎಸ್'ಐ ಬಿಡಲ್ಲ..!

Published : Oct 05, 2017, 09:30 AM ISTUpdated : Apr 11, 2018, 12:40 PM IST
ದಾವೂದ್ ಭಾರತಕ್ಕೆ ಬರ್ತೀನಿ ಅಂದ್ರೂ ಐಎಸ್'ಐ ಬಿಡಲ್ಲ..!

ಸಾರಾಂಶ

2015ರಲ್ಲಿ ಹಿರಿಯ ವಕೀಲ ರಾಮ್ ಜೇಠ್ಮಲಾನಿ ಲಂಡನ್'ನಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂನನ್ನು ಭೇಟಿಯಾಗಿದ್ದಾಗಿ ತಿಳಿಸಿದ್ದರು. ಈ ವೇಳೆ ದಾವೂದ್ ಭಾರತಕ್ಕೆ ಮರಳುವ ಇಚ್ಛೆ ವ್ಯಕ್ತಪಡಿಸಿದ್ದ ಎಂಬ ಸ್ಫೋಟಕ ಮಾಹಿತಿ ಹೊರಹಾಕಿದ್ದರು.

ಮುಂಬೈ(ಅ.05): ದೇಶದ ಮೋಸ್ಟ್ ವಾಂಟೆಡ್ ಉಗ್ರ ದಾವೂದ್ ಇಬ್ರಾಹಿಂ ಮುಂದಿನ ಲೋಕಸಭೆ ಚುನಾವಣೆಯೊಳಗೆ ಭಾರತಕ್ಕೆ ಮರಳಬಹುದು ಎಂಬ ವಾದವನ್ನು ಪೊಲೀಸರ ವಶದಲ್ಲಿರುವ ಆತನ ಸೋದರ ಇಕ್ಬಾಲ್ ಇಬ್ರಾಹಿಂ ಕಸ್ಕರ್ ಅಲ್ಲಗಳೆದಿದ್ದಾನೆ.

ಭಾರತಕ್ಕೆ ಮರಳುವ ಆಲೋಚನೆಯನ್ನೂ ದಾವೂದ್ ಹೊಂದಿಲ್ಲ ಎಂದು ವಿಚಾರಣೆ ವೇಳೆ ತಿಳಿಸಿದ್ದಾನೆ. ಒಂದು ವೇಳೆ ದಾವೂದ್

ಭಾರತಕ್ಕೆ ಮರಳಲು ಬಯಸಿದರೂ, ಪಾಕಿಸ್ತಾನದ ಗುಪ್ತಚರ ಸಂಸ್ಥೆ (ಐಎಸ್‌ಐ) ಅದಕ್ಕೆ ಅವಕಾಶ ನೀಡುವುದಿಲ್ಲ ಎಂದಿದ್ದಾನೆ.

ದಾವೂದ್ ಏನಾದರೂ ಭಾರತಕ್ಕೆ ಹಿಂತಿರುಗಿದರೆ ತನ್ನ ಹಲವು ರಹಸ್ಯಗಳು ಬಯಲಾಗಿ, ತಾನು ಮುಜುಗರ ಅನುಭವಿಸಬೇಕಾಗುತ್ತದೆ ಎಂಬ ಭಾವನೆಯನ್ನು ಐಎಸ್‌ಐ ಹೊಂದಿದೆ ಎಂದು ಇಕ್ಬಾಲ್ ತಿಳಿಸಿದ್ದಾನೆ.

2015ರಲ್ಲಿ ಹಿರಿಯ ವಕೀಲ ರಾಮ್ ಜೇಠ್ಮಲಾನಿ ಲಂಡನ್'ನಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂನನ್ನು ಭೇಟಿಯಾಗಿದ್ದಾಗಿ ತಿಳಿಸಿದ್ದರು. ಈ ವೇಳೆ ದಾವೂದ್ ಭಾರತಕ್ಕೆ ಮರಳುವ ಇಚ್ಛೆ ವ್ಯಕ್ತಪಡಿಸಿದ್ದ ಎಂಬ ಸ್ಫೋಟಕ ಮಾಹಿತಿ ಹೊರಹಾಕಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕರೆಂಟ್‌ ಅಕೌಂಟಲ್ಲಿ ₹150 ಕೋಟಿ ಅಲ್ಲ, ₹1 ಸಾವಿರ ಕೋಟಿ ವಹಿವಾಟು
ಬಾಗಲಕೋಟೆ: ಬುದ್ಧಿಮಾಂದ್ಯನ ಮೇಲೆ ಅಮಾನವೀಯ ಹಲ್ಲೆ