7 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಮಾಡಿ ಕ್ರೂರವಾಗಿ ಕೊಲೆಗೈದಿದ್ದ ಅಪರಾಧಿಗೆ ಪಾಕಿಸ್ತಾನ ಭಯೋತ್ಪಾದನಾ ವಿರೋಧಿ ನ್ಯಾಯಾಲಯ ಮರಣದಂಡನೆ ಶಿಕ್ಷೆ ವಿಧಿಸಿದೆ. ಈ ಮೂಲಕ ದೇಶದ ಇತಿಹಾಸದಲ್ಲೇ ಮೊದಲ ಬಾರಿಗೆ ಅತಿ ಕಡಿಮೆ ಅವಧಿಯಲ್ಲಿ ನ್ಯಾಯಾಲಯವು ಪ್ರಕರಣ ಇತ್ಯರ್ಥ ಮಾಡಿದೆ.
ಲಾಹೋರ್: 7 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಮಾಡಿ ಕ್ರೂರವಾಗಿ ಕೊಲೆಗೈದಿದ್ದ ಅಪರಾಧಿಗೆ ಪಾಕಿಸ್ತಾನ ಭಯೋತ್ಪಾದನಾ ವಿರೋಧಿ ನ್ಯಾಯಾಲಯ ಮರಣದಂಡನೆ ಶಿಕ್ಷೆ ವಿಧಿಸಿದೆ. ಈ ಮೂಲಕ ದೇಶದ ಇತಿಹಾಸದಲ್ಲೇ ಮೊದಲ ಬಾರಿಗೆ ಅತಿ ಕಡಿಮೆ ಅವಧಿಯಲ್ಲಿ ನ್ಯಾಯಾಲಯವು ಪ್ರಕರಣ ಇತ್ಯರ್ಥ ಮಾಡಿದೆ.
ಬಾಲಕಿ ಅಪಹರಣ, ಅತ್ಯಾಚಾರ, ಕೊಲೆ ಆಪಾದನೆಯ ಮೇಲೆ ಇಮ್ರಾನ್ ಆಲಿಗೆ (23) ಕೋರ್ಟ್ ಈ ಶಿಕ್ಷೆ ವಿಧಿಸಿದೆ. ಅಲ್ಲದೆ 8 ಇತರ ಬಾಲಕಿಯರ ಹತ್ಯೆಗೈದ ಆರೋಪದ ಮೇಲೆ 7 ವರ್ಷ ಜೈಲು ಮತ್ತು 10 ಲಕ್ಷ ದಂಡವನ್ನೂ ಕೋರ್ಟ್ ವಿಧಿಸಿದೆ. ‘ತೀರ್ಪು ಸಮಾಧಾನ ತರಿಸಿದೆ, ಆದರೆ ಅಪರಾಧಿಯನ್ನು ಸಾರ್ವಜನಿಕವಾಗಿ ಗಲ್ಲಿಗೇರಿಸಬೇಕು’ ಎಂದು ಬಾಲಕಿ ತಂದೆ ಹೇಳಿದ್ದಾರೆ.
ಇಮ್ರಾನ್ 7 ವರ್ಷದ ಬಾಲಕಿಯನ್ನು ಜನವರಿಯಲ್ಲಿ ಅತ್ಯಾಚಾರ ಮಾಡಿ ಕೊಲೆಗೈದು ಲಾಹೋರ್ ಸಮೀಪದ ಕಸೂರ್ ನಗರದ ತಿಪ್ಪೆಯಲ್ಲಿ ಬಳಿ ಎಸೆದು ಹೋಗಿದ್ದ. ಈ ಪ್ರಕರಣ ದೇಶಾದ್ಯಂತ ಸಂಚಲನವನ್ನೇ ಮೂಡಿಸಿತ್ತು. ಸಾರ್ವಜನಿಕರು ಆರೋಪಿಯನ್ನು ಬಂಧಿಸುವಂತೆ ಆಗ್ರಹಿಸಿದ್ದರು. ಅನಂತರ 2 ವಾರಗಳ ಬಳಿಕ ಆರೋಪಿ ಇಮ್ರಾನ್ ಆಲಿಯನ್ನು ಪೊಲೀಸರು ಬಂಧಿಸಿದ್ದರು.