
ಲಾಹೋರ್[ಡಿ.31]: 10ನೇ ತರಗತಿ ಓದಿದವರಿಗೆ ಸಣ್ಣದೊಂದು ಗುಮಾಸ್ತ ಹುದ್ದೆ ಸಿಗುವುದೂ ಕಷ್ಟ. ಅಂಥದ್ದರಲ್ಲಿ ಪಾಕಿಸ್ತಾನ ಇಂಟರ್‌ನ್ಯಾಷನಲ್ ಏರ್‌ಲೈನ್ಸ್ (ಪಿಐಎ)ನ ಐದು ಮಂದಿ ಪೈಲಟ್‌ಗಳು 10ನೇ ತರಗತಿಯಲ್ಲೂ ಉತ್ತೀರ್ಣರಾಗಿಲ್ಲ.
ಏಳು ಮಂದಿ ಪೈಲಟ್‌ಗಳು ನಕಲಿ ದಾಖಲೆ ಪತ್ರಗಳನ್ನು ನೀಡಿ ಪೈಲಟ್ ಹುದ್ದೆ ಗಿಟ್ಟಿಸಿಕೊಂಡಿದ್ದಾರೆ ಎಂದು ಪಾಕಿಸ್ತಾನ ವಿಮಾನಯಾನ ಸಂಸ್ಥೆ ಸುಪ್ರಿಂಕೋರ್ಟ್‌ಗೆ ತಿಳಿಸಿದೆ. 10ನೇ ತರಗತಿ ಪಾಸಾಗದವರು ಬಸ್ ಓಡಿಸಲೂ ಅರ್ಹರಲ್ಲ. ಆದರೆ, ವಿಮಾನ ಚಾಲನೆ ಮಾಡಿ ಜನರ ಜೀವವನ್ನು ಅಪಾಯಕ್ಕೆ ತಳ್ಳಿದ್ದಾರೆ ಎಂದು ಸುಪ್ರೀಕೋರ್ಟ್‌ನ ತ್ರಿಸದಸ್ಯ ಪೀಠ ಕಿಡಿಕಾರಿದೆ.
ಈ ಮಧ್ಯೆ ಸೂಕ್ತ ದಾಖಲೆಗಳನ್ನು ಒದಗಿಸದೇ ಇರುವ ಕಾರಣ ಸುಮಾರು 50 ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ