
ಇಸ್ಲಾಮಾಬಾದ್[ಮಾ.06]: ಪಾಕಿಸ್ತಾನದ ಖಾಸಗಿ ಚಾನೆಲ್‌ಗಳಲ್ಲಿ ಭಾರತದ ಚಲನಚಿತ್ರಗಳು ಮತ್ತು ಟೀವಿ ಕಾರ್ಯಕ್ರಮಗಳನ್ನು ಪ್ರಸಾರ ಮಾಡುವುದಕ್ಕೆ ಪಾಕಿಸ್ತಾನದ ಸುಪ್ರೀಂಕೋರ್ಟ್ ನಿಷೇಧ ಹೇರಿದೆ.
ಪುಲ್ವಾಮಾ ದಾಳಿಯ ಬಳಿಕ ಉಭಯ ದೇಶಗಳ ನಡುವೆ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿರುವ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ. ಪಾಕ್‌ನ ಮಾಹಿತಿ ಹಾಗೂ ಪ್ರಸಾರ ಖಾತೆ ಸಚಿವ ಚೌಧರಿ ಫವಾದ್ ಹುಸೇನ್ ಭಾರತೀಯ ಚಲನಚಿತ್ರ ಹಾಗೂ ಟಿವಿ ಕಾರ್ಯಕ್ರಮಗಳ ಮೇಲೆ ನಿಷೇಧ ಹೇರಿದ ಬೆನ್ನಲ್ಲೇ ಈ ಆದೇಶ ಹೊರಬಿದ್ದಿದೆ.
ಇನ್ನು ಪುಲ್ವಾಮಾ ದಾಳಿ ನಡೆದ ಬೆನ್ನಲ್ಲೇ ಭಾರತ ಕೂಡಾ ಪಾಕಿಸ್ತಾನದ ಕಲಾವಿದರಿಗೆ ನಿಷೇಧ ಹೇರಿತ್ತು ಎಂಬುವುದು ಉಲ್ಲೇಖನೀಯ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.