ಮಸೂದ್ ಸಹೋದರ ಸೇರಿ 43 ಉಗ್ರರನ್ನು ಬಂಧಿಸಿದ ಪಾಕಿಸ್ತಾನ!

Published : Mar 05, 2019, 08:33 PM IST
ಮಸೂದ್ ಸಹೋದರ ಸೇರಿ 43 ಉಗ್ರರನ್ನು ಬಂಧಿಸಿದ ಪಾಕಿಸ್ತಾನ!

ಸಾರಾಂಶ

ಉಗ್ರರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾದ ಪಾಕಿಸ್ತಾನ| ನಿಷೇಧಿತ ಸಂಘಟನೆಗಳ 43 ಸದಸ್ಯರ ಬಂಧನ| ಬಂಧಿತರಲ್ಲಿ ಜೈಷ್ ಮುಖ್ಯಸ್ಥ ಮಸೂದ್ ಅಜರ್ ಸಹೋದರ| ನಿಷೇಧಿತ ಎಲ್ಲಾ ಸಂಘಟನೆಗಳ ವಿರುದ್ಧ ಸೂಕ್ತ ಕ್ರಮದ ಭರವಸೆ ನೀಡಿದ ಪಾಕಿಸ್ತಾನ| ಕೊನೆಗೂ ಅಂತಾರಾಷ್ಟ್ರೀಯ ಒತ್ತಡಕ್ಕೆ ಮಣಿಯಿತು ಪಾಕಿಸ್ತಾನ| 

ಇಸ್ಲಾಮಾಬಾದ್(ಮಾ.05): ಪುಲ್ವಾಮಾ ದಾಳಿಯ ಬಳಿಕ ಉಗ್ರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಭಾರತವೂ ಸೇರಿದಂತೆ ವಿಶ್ವದ ಪ್ರಮುಖ ರಾಷ್ಟ್ರಗಳು ಪಾಕಿಸ್ತಾನದ ಮೇಲೆ ಒತ್ತಡ ಹಾಕಿದ್ದವು. ಉಗ್ರವಾದಕ್ಕೆ ಪಾಕ್ ಕುಮ್ಮಕ್ಕು ನೀಡುತ್ತಿರುವುದನ್ನು ಭಾರತ ವಿಶ್ವ ಸಮುದಾಯಕ್ಕೆ ಮನವರಿಕೆ ಮಾಡಿ ಕೊಟ್ಟಿತ್ತು.

ಅಂತಾರಾಷ್ಟ್ರೀಯ ಸಮುದಾಯದ ಒತ್ತಡಕ್ಕೆ ಕೊನೆಗೂ ಮಣಿದಿರುವ ಪಾಕಿಸ್ತಾನ ಇಂದು  ಜೈಷ್ -ಎ-ಮೊಹ್ಮದ್ ಉಗ್ರ ಸಂಘಟನೆ  ಮುಖ್ಯಸ್ಥ ಮಸೂದ್ ಅಝರ್ ಸಹೋದರ  ಹಾಗೂ ಇತರ ನಿಷೇಧಿತ ಉಗ್ರ ಸಂಘಟನೆಯ 43 ಸದಸ್ಯರನ್ನು ಬಂಧಿಸಿದೆ.

ಮಸೂದ್ ಅಝರ್ ಸಹೋದರ ಮುಫ್ತಿ ಅಬ್ದುರ್ ರೌಪ್ ಮತ್ತು ಹಮದ್ ಅಝರ್  ಸೇರಿದಂತೆ ಇತರರನ್ನು ಬಂಧಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ನಿಷೇಧಿತ ಎಲ್ಲಾ ಸಂಘಟನೆಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಪಾಕಿಸ್ತಾನ ಒಳಾಡಳಿತ ಸಚಿವ ಶಹರಿಯಾರ್ ಖಾನ್ ಅಫ್ರಿದಿ ಭರವಸೆ ನೀಡಿದ್ದಾರೆ.

ಸರ್ಕಾರದ ಆದೇಶದ ಪ್ರಕಾರ ನಿಷೇಧಿತ ಎಲ್ಲಾ ಉಗ್ರ ಸಂಘಟನೆಗಳ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲಾಗುವುದು  ಎಂದು ವಿದೇಶಾಂಗ ಕಚೇರಿ ವಕ್ತಾರ ಮೊಹಮ್ಮದ್ ಫೈಸಲ್ ತಿಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮುದ್ದಿನ ಶ್ವಾನಗಳಿಗಾಗಿ ಅನಿಮೇಟೆಡ್ ಸಿನಿಮಾ ಶೋ ಆಯೋಜಿಸಿದ ಥಿಯೇಟರ್: ರೆಡ್ ಕಾರ್ಪೆಟ್ ಹಾಸಿ ಸ್ವಾಗತ
ಇಂಡಿಗೋ ವಿಮಾನ ರದ್ದಾಗಿ ಪರದಾಡುತ್ತಿರುವ ಪ್ರಯಾಣಿಕರ ನೆರವಿಗೆ ಧಾವಿಸಿದ ಭಾರತೀಯ ರೈಲ್ವೆ