ಫಲಿಸಿತು ಭಾರತೀಯರ ಪೂಜಾಫಲ: ಅಭಿನಂದನ್ ನಾಳೆ ಭಾರತಕ್ಕೆ!

Published : Feb 28, 2019, 04:45 PM ISTUpdated : Feb 28, 2019, 05:27 PM IST
ಫಲಿಸಿತು ಭಾರತೀಯರ ಪೂಜಾಫಲ: ಅಭಿನಂದನ್ ನಾಳೆ ಭಾರತಕ್ಕೆ!

ಸಾರಾಂಶ

ಭಾರತಕ್ಕೆ ಸಿಕ್ತು ಅತಿದೊಡ್ಡ ರಾಜತಾಂತ್ರಿಕ ಜಯ| ಪಾಕ್ ವಶದಲ್ಲಿದ್ದ ಭಾರತೀಯ ಪೈಲೆಟ್ ಅಭಿನಂದನ್ ಬಿಡುಗಡೆ| ನಾಳೆ ಸ್ವದೇಶಕ್ಕೆ ಮರಳಲಿರುವ ವಿಂಗ್ ಕಮಾಂಡರ್ ಅಭಿನಂದನ್| ಪೈಲೆಟ್ ಬಿಡುಗಡೆ ನಿರ್ಧಾರ ಪ್ರಕಟಿಸಿದ ಪಾಕ್ ಪ್ರಧಾನಿ| ಸಂಸತ್ತಿನಲ್ಲಿ ಬಿಡುಗಡೆ ನಿರ್ಧಾರ ಘೋಷಿಸಿದ ಇಮ್ರಾನ್ ಖಾನ್|    

ನವದೆಹಲಿ(ಫೆ.28): ಪಾಕಿಸ್ತಾನದ ವಶದಲ್ಲಿರುವ ಭಾರತೀಯ ವಾಯುಸೇನಯ ವಿಂಗ್ ಕಮಾಂಡರ್ ಅಭಿನಂದನ್ ಅವರನ್ನು ಬಿಡುಗಡೆ ಮಾಡುವುದಾಗಿ ಪಾಕಿಸ್ತಾನ ಘೋಷಿಸಿದೆ.

ಈ ಕುರಿತು ಪಾಕ್ ಸಂಸತ್ತಿನಲ್ಲಿ ಮಾತನಾಡಿದ ಇಮ್ರಾನ್ ಖಾನ್, ನಮ್ಮ ವಶದಲ್ಲಿರುವ ಭಾರತೀಯ ಪೈಲೆಟ್ ಅಭಿನಂದನ್ ಅವರನ್ನು ಬಿಡುಗಡೆ ಮಾಡುವ ನಿರ್ಧಾರ ಕೈಗೊಂಡಿರುವುದಾಗಿ ತಿಳಿಸಿದ್ದಾರೆ.

ಭಾರತೀಯ ಪೈಲೆಟ್ ಅಭಿನಂದನ್ ಅವರನ್ನು ಬಿಡುಗಡೆಗೊಳಿಸುವಂತೆ ಭಾರತ ಒತ್ತಾಯ ಮಾಡುತ್ತಲೇ ಇತ್ತು. ಸದ್ಯ ಭಾರತದ ಒತ್ತಾಯಕ್ಕೆ ಮಣಿದಿರುವ ಪಾಕ್, ಪೈಲೆಟ್ ಬಿಡುಗಡೆ ಮಾಡಲು ನಿರ್ಧರಿಸಿದ್ದಾರೆ.

ಈ ಕುರಿತು ಪಾಕ್ ಸಂಸತ್ತಿನಲ್ಲಿ ಮಾತನಾಡಿದ ಇಮ್ರಾನ್ ಖಾನ್, ನಿನ್ನೆಯೇ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರನ್ನು ದೂರವಾಣಿ ಮೂಲಕ ಸಂಪರ್ಕಿಸಲು ಪ್ರಯತ್ನಿಸಿದ್ದಾಗಿ ಹೇಳಿದ್ದಾರೆ.

ಪಾಕಿಸ್ತಾನ ಶಾಂತಿ ಬಯಸುತ್ತಿದ್ದು, ಭಾರತ ಎಲ್ಲಾ ವೈಮನಸ್ಸನ್ನು ಬದಿಗಿರಿಸಿ ಶಾಂತಿ ಮಾತುಕತೆಗೆ ಮುಂದಾಗಬೇಕೆಂದು ಇಮ್ರಾನ್ ಖಾನ್ ಮತ್ತೊಮ್ಮೆ ಭಾರತಕ್ಕೆ ಮನವಿ ಮಾಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅಣ್ಣಾ, ಇನ್ನು ಎಷ್ಟೊತ್ತು ಎಂದ ಗ್ರಾಹಕನಿಗೆ ಇದು ಪ್ಲೇನ್ ಅಲ್ಲ ಅಂದ ಬೆಂಗ್ಳೂರು ಕ್ಯಾಬ್ ಡ್ರೈವರ್!
ಸೊಗಸಾದ ಬಜೆಟ್‌ ಫ್ರೆಂಡ್ಲಿ ಸ್ಮಾರ್ಟ್‌ಫೋನು ಬೇಕಾ? ಇಲ್ಲಿದೆ ಸ್ಯಾಮ್‌ಸಂಗ್ ಗ್ಯಾಲಕ್ಸಿ ಎ17 5ಜಿ!