
ಇಸ್ಲಾಮಾಬಾದ್(ಜ.31): ಜಮಾತ್ ಉದ್ ದವಾ ಸಂಘಟನೆಯ ಮುಖ್ಯಸ್ಥ ಹಫೀಜ್ ಸಯ್ಯದ್ ಗೃಹ ಬಂಧನವನ್ನು ಖಂಡಿಸಿ ಈತನ ಬೆಂಬಲಿಗರು ಹಾಗೂ ಪಾಕಿಸ್ತಾನಿ ಇಸ್ಲಾಮಿಕ್ ಚಾರಿಟಿಯ ಉದ್ಯೋಗಿಗಳು ಪಾಕ್ ದೇಶದಾದ್ಯಂತ ಪ್ರತಿಭಟನೆ ನಡೆಸಿದ್ದಾರೆ.
2008ರ ಮುಂಬೈ ದಾಳಿಯ ಮಾಸ್ಟರ್ ಮೈಂಡ್ ಹಫೀಜ್ ಹಲವು ವರ್ಷಗಳಿಂದ ಪಾಕ್'ನಲ್ಲೇ ನೆಲೆಸಿದ್ದು, ಡೊನಾಲ್ಡ್ ಟ್ರಂಪ್ ಅಮೆರಿಕಾ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ನಂತರ ಪಾಕ್ ಸರ್ಕಾರ ಈತನನ್ನು ಗೃಹ ಬಂಧನದಲ್ಲಿರಿಸಿತ್ತು. ಭಾರತ ಹಾಗೂ ಅಮೆರಿಕಾ ಎರಡೂ ದೇಶಗಳಿಗೂ ಬೇಕಾದ ಕುಖ್ಯಾತ ಅಪರಾಧಿಯಾಗಿದ್ದಾನೆ. ಈತನನ್ನು ಹಿಡಿದುಕೊಟ್ಟವರಿಗಾಗಿ ಅಮೆರಿಕಾ ಸರ್ಕಾರ 1 ಕೋಟಿ ಡಾಲರ್ ಬಹುಮಾನ ಘೋಷಿಸಿದೆ.
ತನ್ನ ಕಾರ್ಯಾಚರಣೆಯನ್ನು ಮುಂದುವರಿಕೊಂಡು ಹೋಗಲಿದ್ದು, ಗೃಹ ಬಂಧನಕ್ಕೆ ಡೊನಾಲ್ಡ್ ಟ್ರಂಪ್ ಆಡಳಿತದ ಒತ್ತಡವೆ ಕಾರಣ ಎಂದು ಹಫೀಜ್ ಪಾಕ್ ಸರ್ಕಾರದ ಕ್ರಮವನ್ನು ಖಂಡಿಸಿದ್ದಾನೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.