ಉಡುಪಿಗೆ ಅಭಿನಂದನ್ ಕಳ್ಸಿ: ಶ್ರೀಗಳ ಮನವಿಗೆ ಸಚಿವೆ ಹೇಳಿದ್ದು ಪತ್ರ ಬರೆದು ತಿಳ್ಸಿ

Published : Mar 26, 2019, 11:48 AM ISTUpdated : Mar 26, 2019, 11:51 AM IST
ಉಡುಪಿಗೆ ಅಭಿನಂದನ್ ಕಳ್ಸಿ: ಶ್ರೀಗಳ ಮನವಿಗೆ ಸಚಿವೆ ಹೇಳಿದ್ದು ಪತ್ರ ಬರೆದು ತಿಳ್ಸಿ

ಸಾರಾಂಶ

ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಶೋಭಾ ಕರಂದ್ಲಾಜೆ ಅವರ ನಾಮಪತ್ರ ಸಲ್ಲಿಕೆಯಲ್ಲಿ ಭಾಗವಹಿಸಲು ಉಡುಪಿಗೆ ಆಗಮಿಸಿದ್ದು, ಈ ಸಂದರ್ಭದಲ್ಲಿ ಮುಂಜಾನೆ ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಪಲಿಮಾರು ಸ್ವಾಮೀಜಿ ಅವರಿಂದ ಆಶೀರ್ವಾದ ಪಡೆದರು.

ಉಡುಪಿ (ಮಾ. 26): ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಶೋಭಾ ಕರಂದ್ಲಾಜೆ ಅವರ ನಾಮಪತ್ರ ಸಲ್ಲಿಕೆಯಲ್ಲಿ ಭಾಗವಹಿಸಲು ಉಡುಪಿಗೆ ಆಗಮಿಸಿದ್ದು, ಈ ಸಂದರ್ಭದಲ್ಲಿ ಮುಂಜಾನೆ ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಪಲಿಮಾರು ಸ್ವಾಮೀಜಿ ಅವರಿಂದ ಆಶೀರ್ವಾದ ಪಡೆದರು.

ಆಧ್ಯಾತ್ಮಿಕ ಶ್ರೀಗಳಲ್ಲಿ ನನ್ನ ಲೌಕಿಕ ವಿನಂತಿಯಿದೆ. ಈ ಬಾರಿ ಕೃಷ್ಣನಲ್ಲಿ ದೇಶಕ್ಕಾಗಿ ಪ್ರಾರ್ಥಿಸಬೇಕು. ನರೇಂದ್ರ ಮೋದಿ ಮತ್ತೆ ಪ್ರಧಾನಿ ಆಗಬೇಕು ದೇಶ ಸುರಕ್ಷಿತರ ಕೈಯ್ಯಲ್ಲಿರುವಂತೆ ದೇವರಲ್ಲಿ ಪ್ರಾರ್ಥಿಸಿ. ಮತ್ತೆ ಬಿಜೆಪಿ ಸರಕಾರ ರಚನೆಯಾಗುವಂತೆ ಆಶೀರ್ವದಿಸಿ ಎಂದು ನಿರ್ಮಲಾ ಸೀತಾರಾಮನ್ ವಿನಂತಿ ಮಾಡಿದ್ದಾರೆ. 

ಉಡುಪಿ ಜೊತೆ ನನಗೆ ಒಂದನೇ ವರ್ಷದಿಂದ ನಂಟು ಇದೆ. ಕೊಲ್ಲೂರು, ಕೃಷ್ಣಮಠದ ಜೊತೆ ನಿರಂತರ ಸಂಪರ್ಕವಿದೆ. ಮಠದ ಬ್ರಹ್ಮಕಲಶೋತ್ಸವದಲ್ಲಿ ಪಾಲ್ಗೊಳ್ಳುತ್ತೇನೆ ಎಂದು ಪಲಿಮಾರು ಶ್ರೀಗಳಿಗೆ ನಿರ್ಮಲಾ ಸೀತಾರಾಮನ್ ಭರವಸೆ ನೀಡಿದರು. 

ಪಾಕಿಸ್ತಾನ ವಿಮಾನವನ್ನು ಹೊಡೆದುರುಳಿಸಿದ ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್ ನನ್ನು ಉಡುಪಿಗೆ ಕಳುಹಿಸಿಕೊಡಿ.  ಅವರ ಪರಾಕ್ರಮ ನಮಗೆ ಬಹಳ ಮೆಚ್ಚುಗೆಯಾಗಿದೆ. ಕೃಷ್ಣಮಠದಲ್ಲಿ ಅಭಿನಂದನ್ ಗೆ ಗೌರವಾರ್ಪಣೆ ಮಾಡಬೇಕು ಎಂದು ಉಡುಪಿ ಪರ್ಯಾಯ ಪಲಿಮಾರು ಮಠದ ಶ್ರೀ ವಿದ್ಯಾದೀಶ ತೀರ್ಥ ಸ್ವಾಮೀಜಿ ಅವರು ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತರಾಮ್ ಅವರಲ್ಲಿ ಮನವಿ ಮಾಡಿದ್ದಾರೆ.

"
 
ಇದಕ್ಕೆ ಸಕರಾತ್ಮಕವಾಗಿ ಪ್ರತಿಕ್ರಿಯಿಸಿದ  ನಿರ್ಮಲಾ ಸೀತಾರಾಮನ್,   ಕಾನೂನಾತ್ಮಕ ಅಡೆ ತಡೆ ಇಲ್ಲದಿದ್ದರೆ ಖಂಡಿತಾ ಕಳುಹಿಸಿಕೊಡುತ್ತೇವೆ. ಮಠದ ವತಿಯಿಂದ ರಕ್ಷಣಾ ಇಲಾಖೆಗೆ ಒಂದು ಪತ್ರ ಬರೆಯಿರಿ ಎಂದವರು ಭರವಸೆ ನೀಡಿದರು.

ಈ ಸಂದರ್ಭ ಉಡುಪಿ ಚಿಕ್ಕಮಗಳೂರು ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ, ರಾಜ್ಯ ಬಿಜೆಪಿ ಮಹಿಳಾ ಮೋರ್ಚ ಅಧ್ಯಕ್ಷೆ ಭಾರತೀ ಶೆಟ್ಟಿ, ಉಡುಪಿ ಶಾಸಕ ರಘುಪತಿ ಭಟ್ ಉಪಸ್ಥಿತರಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಟಿವಿ ಪತ್ರಿಕೋದ್ಯಮದಲ್ಲಿ ಮೇಲುಗೈ.. ‘ಏಷ್ಯಾನೆಟ್ ಸುವರ್ಣ ನ್ಯೂಸ್‌’ಗೆ 8 ಎನ್ಬಾ ಪ್ರಶಸ್ತಿ
ಬ್ಯೂಟಿ ಸೀಕ್ರೆಟ್.. ಇಲ್ಲಿದೆ ಭಾರತೀಯ ಮಹಿಳೆಯರ ಮೇಕಪ್ ಕ್ರಾಂತಿ ಶುರುವಾದ ಕತೆ!