ಜಯಾ ಸಾವಿನ ತನಿಖೆಗೆ ಆದೇಶಿಸಲು ರಾಷ್ಟ್ರಪತಿಗೆ ಮನವಿ

Published : Feb 28, 2017, 05:57 PM ISTUpdated : Apr 11, 2018, 01:10 PM IST
ಜಯಾ ಸಾವಿನ ತನಿಖೆಗೆ ಆದೇಶಿಸಲು ರಾಷ್ಟ್ರಪತಿಗೆ ಮನವಿ

ಸಾರಾಂಶ

ರಾಜ್ಯಸಭಾ ಸದಸ್ಯ ವಿ.ಮೈತ್ರೇಯನ್ ನೇತೃತ್ವದಲ್ಲಿ 12 ಮಂದಿ ಸಂಸದರ ನಿಯೋಗ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ಪ್ರಣವ್ ಮುಖರ್ಜಿಯವರಿಗೆ ಈ ಸಂಬಂಧ ಮನವಿಯೊಂದನ್ನು ಸಲ್ಲಿಸಿದ್ದಾರೆ. ನ್ಯಾಯಾಂಗ ಅಥವಾ ಸಿಬಿಐ ತನಿಖೆ ನಡೆಸುವುದಕ್ಕೆ ಬೇಕಾದ ಕ್ರಮಗಳನ್ನು ಕೈಗೊಳ್ಳುವಂತೆ ಮನವಿಯಲ್ಲಿ ವಿನಂತಿಸಲಾಗಿದೆ.

ನವದೆಹಲಿ(ಫೆ.28): ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಸಾವಿನ ಸುತ್ತ ಇರುವ ಸಂದೇಹಗಳ ಕುರಿತು ತನಿಖೆ ನಡೆಸಲು ಮಧ್ಯ ಪ್ರವೇಶಿಸುವಂತೆ ಎಐಎಡಿಎಂಕೆ ಬಂಡಾಯ ನಾಯಕ ಪನ್ನೀರ್‌ಸೆಲ್ವಂ ಬೆಂಬಲಿಗ ಸಂಸದರು ಒತ್ತಾಯಿಸಿದ್ದಾರೆ.

ರಾಜ್ಯಸಭಾ ಸದಸ್ಯ ವಿ.ಮೈತ್ರೇಯನ್ ನೇತೃತ್ವದಲ್ಲಿ 12 ಮಂದಿ ಸಂಸದರ ನಿಯೋಗ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ಪ್ರಣವ್ ಮುಖರ್ಜಿಯವರಿಗೆ ಈ ಸಂಬಂಧ ಮನವಿಯೊಂದನ್ನು ಸಲ್ಲಿಸಿದ್ದಾರೆ. ನ್ಯಾಯಾಂಗ ಅಥವಾ ಸಿಬಿಐ ತನಿಖೆ ನಡೆಸುವುದಕ್ಕೆ ಬೇಕಾದ ಕ್ರಮಗಳನ್ನು ಕೈಗೊಳ್ಳುವಂತೆ ಮನವಿಯಲ್ಲಿ ವಿನಂತಿಸಲಾಗಿದೆ. ಡಿಸೆಂಬರ್‌ನಲ್ಲಿ ಜಯಲಲಿತಾ ನಿಧನರಾದ ಬಳಿಕ ಅವರ ಸಾವಿನ ಬಗ್ಗೆ ಪಕ್ಷದ ಕಾರ್ಯಕರ್ತರು ಮತ್ತು ಸಾರ್ವಜನಿಕರಲ್ಲಿ ಸಂದೇಹಗಳಿವೆ. ವಿಷಯವನ್ನು ಕೈಗೆತ್ತಿಕೊಂಡು, ಸತ್ಯವನ್ನು ಬಹಿರಂಗ ಪಡಿಸಲು ತನಿಖೆ ನಡೆಸಲು ಕೇಂದ್ರ ಸರ್ಕಾರಕ್ಕೆ ಆದೇಶಿಸುವಂತೆ ವಿನಂತಿಸಿದ್ದೇವೆ ಎಂದು ಮೈತ್ರೇಯನ್ ಹೇಳಿದ್ದಾರೆ. ಸಂದೇಹವನ್ನು ನಿವಾರಿಸುವುದೇ ಅಮ್ಮಾಗೆ ಸಲ್ಲಿಸುವ ನಿಜವಾದ ಶ್ರದ್ಧಾಂಜಲಿ ಎಂದು ಅವರು ಪ್ರತಿಪಾದಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬೆಂಗಳೂರು: 2 ಲಕ್ಷ ಬೆಲೆಯ ಗಿಳಿ ರಕ್ಷಿಸಲು ಹೋಗಿ ಪ್ರಾಣ ಕಳೆದುಕೊಂಡ ಯುವಕ!
ವಿಮಾನದಲ್ಲಿ ಹೃದಯಾಘಾತ- ಅಮೆರಿಕ ಪ್ರಜೆಯ ಜೀವ ಉಳಿಸಿದ ಡಾ. ಅಂಜಲಿ ನಿಂಬಾಳ್ಕರ್