ವಿಧಾನಸೌಧ ವಜ್ರ ಮಹೋತ್ಸವಕ್ಕೆ ದುಂದು ವೆಚ್ಚ; ಪರಮೇಶ್ವರ್ ವಿರೋಧ

Published : Oct 16, 2017, 05:30 PM ISTUpdated : Apr 11, 2018, 01:08 PM IST
ವಿಧಾನಸೌಧ ವಜ್ರ ಮಹೋತ್ಸವಕ್ಕೆ ದುಂದು ವೆಚ್ಚ; ಪರಮೇಶ್ವರ್ ವಿರೋಧ

ಸಾರಾಂಶ

ವಿಧಾನಸೌಧ ವಜ್ರ ಮಹೋತ್ಸವಕ್ಕೆ ದುಂದು ವೆಚ್ಚ ಮಾಡುತ್ತಿದ್ದೀರೆಂದು  ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು (ಅ.16): ವಿಧಾನಸೌಧ ವಜ್ರ ಮಹೋತ್ಸವಕ್ಕೆ ದುಂದು ವೆಚ್ಚ ಮಾಡುತ್ತಿದ್ದೀರೆಂದು  ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ವಜ್ರ ಮಹೋತ್ಸವ ಆಚರಣೆ ಇರಲಿ.ಆದರೆ,ಶಾಸಕರಿಗೆ ಚಿನ್ನದ ಬಿಸ್ಕತ್,ನೌಕರರಿಗೆ ಬೆಳ್ಳಿ ತಟ್ಟೆಯಂತಹಾ ಉಡುಗೊರೆ ಅಗತ್ಯವಿಲ್ಲ ಎಂದು  ಡಾ.ಜಿ.ಪರಮೇಶ್ವರ ಹೇಳಿಕೆ ನೀಡಿದ್ದಾರೆ.

ವಿಧಾನಸಭಾ ಚುನಾವಣೆಗೆ ಸಜ್ಜಾಗಬೇಕಾಗಿದೆ. ಹಾಗಾಗಿಯೇ ಚುನಾವಣಾ ಪ್ರಣಾಳಿಕೆ ಸಮಿತಿಯನ್ನು ಹೊಸದಾಗಿ ರಚಿಸಲಾಗಿದೆ.  ಜಿಲ್ಲಾಘಟಕಗಳ ಬದಲಾವಣೆಗೂ ಒತ್ತಡವಿತ್ತು.  ಪರಿಣಾಮ ಕೆಲವು ಜಿಲ್ಲೆಗಳಲ್ಲಿ ಬದಲಾವಣೆ ಮಾಡಿದ್ದೇವೆ.  ಚುನಾವಣೆಗೆ ಸಂಭವನೀಯ ಅಭ್ಯರ್ಥಿಗಳನ್ನು ಗುರುತಿಸುವ  ಪ್ರಕ್ರಿಯೆ ಈಗಾಗಲೇ ಪ್ರಾರಂಭವಾಗಿದೆ.

ಅವರಿಗೆ ತಮ್ಮ  ಕ್ಷೇತ್ರಗಳಲ್ಲಿ ಸಿದ್ದತೆ ಮಾಡಿಕೊಳ್ಳುವಂತೆ ಸೂಚಿಸಲಾಗಿದೆ ಎಂದು ಪರಮೇಶ್ವರ್ ಹೇಳಿದ್ದಾರೆ.   

ಸಿ.ಪಿ.ಯೋಗೀಶ್ವರ್ ಸೇರಿದಂತೆ ಕೆಲವರು ಪಕ್ಷ ಬಿಡುವ ಸೂಚನೆಯಿರಲಿಲ್ಲ. ಪಕ್ಷ ಬಿಟ್ಟವರ ಬಗ್ಗೆ ಚಿಂತೆಯೂ ಇಲ್ಲ. ಬಿಜೆಪಿಯಿಂದ 20 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಸಜ್ಜಾಗಿದ್ದಾರೆ ಎಂದು ಹೇಳಿದ್ದಾರೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ತಾಳಿ ಕಟ್ಟುವ ಶುಭ ವೇಳೆ..., 'ಇವನು ನನ್ನ ಗಂಡ' ಎಂದವಳೊಂದಿಗೆ ಸಂಸಾರ ನಡೆಸುತ್ತೇನೆ ಎಂದ ಮದುಮಗ!
ಬೆಂಗಳೂರು ಜನತೆಗೆ ಶೀಘ್ರವೇ ದೊಡ್ಡ ಮುಕ್ತಿ, ನಗರದ ಮೊದಲ ಡಬಲ್ ಡೆಕ್ಕರ್ ಫ್ಲೈಓವರ್ ಮುಂದಿನ ತಿಂಗಳೊಳಗೆ ಸಂಚಾರ ಮುಕ್ತ!