ಗೃಹ ಖಾತೆಗೆ ಪರಮೇಶ್ವರ್ ರಾಜಿನಾಮೆ

By Suvarna Web DeskFirst Published Jun 1, 2017, 6:10 PM IST
Highlights

ಕೆಪಿಸಿಸಿ ಅಧ್ಯಕ್ಷರಾಗಿ ಮತ್ತೊಂದು ಅವಧಿಗೆ ನೇಮಕಾತಿಯಾದ ಹಿನ್ನೆಲೆಯಲ್ಲಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಮ್ಮ ಹುದ್ದೆಗೆ ರಾಜಿನಾಮೆ ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯ ಮೈಸೂರಿನಿಂದ ಆಗಮಿಸುತ್ತಿದ್ದಂತೆ ಗೃಹ ಕಚೇರಿ ಕೃಷ್ಣಾಗೆ ಭೇಟಿ ನೀಡಿ ರಾಜಿನಾಮೆ ಪತ್ರ ಸಲ್ಲಿಸಿದ್ದಾರೆ.

ಬೆಂಗಳೂರು (ಜೂ.01): ಕೆಪಿಸಿಸಿ ಅಧ್ಯಕ್ಷರಾಗಿ ಮತ್ತೊಂದು ಅವಧಿಗೆ ನೇಮಕಾತಿಯಾದ ಹಿನ್ನೆಲೆಯಲ್ಲಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಮ್ಮ ಹುದ್ದೆಗೆ ರಾಜಿನಾಮೆ ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯ ಮೈಸೂರಿನಿಂದ ಆಗಮಿಸುತ್ತಿದ್ದಂತೆ ಗೃಹ ಕಚೇರಿ ಕೃಷ್ಣಾಗೆ ಭೇಟಿ ನೀಡಿ ರಾಜಿನಾಮೆ ಪತ್ರ ಸಲ್ಲಿಸಿದ್ದಾರೆ.

2017 ರ ಚುನಾವಣೆಯಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರುವುದೇ ನಮ್ಮ ಗುರಿ.  ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಚುನಾವಣೆ ಎದುರಿಸುತ್ತೇವೆ.  ಡಿಕೆಶಿ ಸೇರಿದಂತೆ ಯಾರಿಗೂ ಅಸಮಾಧಾನವಿಲ್ಲ ಎಂದು ರಾಜಿನಾಮೆಗೂ ಮುನ್ನ ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ.

ಜೂನ್ 05 ರಿಂದ ವಿಧಾನಮಂಡಲ ಅಧಿವೇಶನ ಹಿನ್ನಲೆಯಲ್ಲಿ ಪರಂ ರಾಜಿನಾಮೆ ಕೂತೂಹಲ ಕೆರಳಿಸಿದೆ.  ಸಿಎಂ ಮುಂದಿನ ನಡೆ ಪರಂ ರಾಜಿನಾಮೆ ಪತ್ರವನ್ನು ರಾಜ್ಯಪಾಲರಿಗೆ ಯಾವಾಗ ರವಾನಿಸಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ.  ಶುಕ್ರವಾರ ರಾತ್ರಿಯೊಳಗಾಗಿ ರವಾನಿಸಿದರೆ ಅಧಿವೇಶನಕ್ಕೂ ಮುನ್ನ ಪರಮೇಶ್ವರ್ ಮಾಜಿ ಸಚಿವರಾಗಲಿದ್ದಾರೆ.  ಶನಿವಾರ ಮಧ್ಯಾಹ್ನದೊಳಗಾಗಿ ರವಾನಿಸದಿದ್ದರೆ ಜೂ.17 ರವರೆಗೂ ಪರಂ ಸಚಿವರಾಗಿ ಮುಂದುವರೆಯಲಿದ್ದಾರೆ.

 

click me!