
ಬೆಂಗಳೂರು : ಕೊರಟಗೆರೆಯಲ್ಲಿ ಗೆಲ್ಲುವುದು ಅಂದುಕೊಂಡಷ್ಟು ಸುಲಭವಲ್ಲ ಎಂಬ ಅರಿವು ಪರಮೇಶ್ವರ್ ಅವರಿಗೆ ಆಗಿದೆ ಎಂದು ಹೇಳಲಾಗುತ್ತಿದೆ. ಆದರೆ ಇನ್ನೊಂದು ವಾದದ ಪ್ರಕಾರ, ಮುಖ್ಯಮಂತ್ರಿಗಳಿಗೆ ಎರಡು ಕಡೆ ಸ್ಪರ್ಧೆಗೆ ಅವಕಾಶ ನೀಡುವುದಿದ್ದರೆ ನನಗೂ ಯಾಕೆ ಈ ಅವಕಾಶ ನೀಡಬಾರದು ಎಂದು ಕೇಳಿ ಹೈಕಮಾಂಡ್ ಕೈ ಕಟ್ಟಿ ಹಾಕುವ ಪರಂ ತಂತ್ರ ಇದಾಗಿದೆ ಎಂದು ಹೇಳಲಾಗುತ್ತಿದೆ.
ಕಳೆದ ಬಾರಿ ಕೊರಟಗೆರೆಯಲ್ಲಿ ಸ್ಪರ್ಧಿಸಿ ಪರಾಜಿತರಾಗಿದ್ದ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅವರು ಈವರೆಗೂ ತಾವು ಇದೇ ಕ್ಷೇತ್ರದಲ್ಲಿ ಸ್ಪರ್ಧಿಸುವುದಾಗಿ ಹೇಳುತ್ತಲೇ ಬಂದಿದ್ದರು. ಆದರೆ ಇದೀಗ ಏಕಾಏಕಿ ಬೆಂಗಳೂರಿನ ಪುಲಕೇಶಿ ನಗರದ ಟಿಕೆಟ್ ಕೂಡ ನೀಡಿ, ನಾನು ಎರಡು ಕ್ಷೇತ್ರದಲ್ಲಿ ಸ್ಪರ್ಧಿಸುತ್ತೇನೆ ಎಂದು ಹೊಸ ವರಸೆ ಪ್ರಾರಂಭಿಸಿದ್ದಾರೆ ಎನ್ನಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.