ಕಾಂಗ್ರೆಸ್ ರಾಜ್ಯಾಧ್ಯಕ್ಷರಾಗಿ ಡಾ. ಪರಮೇಶ್ವರ್ ಮುಂದುವರಿಕೆ

By Suvarna Web DeskFirst Published Jan 8, 2018, 7:48 AM IST
Highlights

ಕೆಲವು ಪ್ರದೇಶ ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆ ಮಾಡಲು ನೂತನ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಸಿದ್ಧರಾಗಿದ್ದಾರೆ ಎಂಬ ವರದಿಗಳ ಬೆನ್ನಲ್ಲೇ, ವದಂತಿಗಳಿಗೆ ಬ್ರೇಕ್ ಹಾಕುವ ಮಹತ್ವದ ಆದೇಶವೊಂದನ್ನು ಎಐಸಿಸಿ ಹೊರಡಿಸಿದೆ.

ನವದೆಹಲಿ(ಜ.08): ಕೆಲವು ಪ್ರದೇಶ ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆ ಮಾಡಲು ನೂತನ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಸಿದ್ಧರಾಗಿದ್ದಾರೆ ಎಂಬ ವರದಿಗಳ ಬೆನ್ನಲ್ಲೇ, ವದಂತಿಗಳಿಗೆ ಬ್ರೇಕ್ ಹಾಕುವ ಮಹತ್ವದ ಆದೇಶವೊಂದನ್ನು ಎಐಸಿಸಿ ಹೊರಡಿಸಿದೆ.

‘ಎಲ್ಲ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಪ್ರಾದೇಶಿಕ ಕಾಂಗ್ರೆಸ್ ಸಮಿತಿಗಳ ಅಧ್ಯಕ್ಷರು ತಮ್ಮ ಹುದ್ದೆಗಳಲ್ಲಿ ಮುಂದುವರಿಯುತ್ತಾರೆ. ಅವರನ್ನು ಬದಲಿಸುವ ಸಂಬಂಧ ಯಾವುದೇ ನಿರ್ಣಯ ಕೈಗೊಳ್ಳುವವವರೆಗೂ ಅವರು ಅದೇ ಹುದ್ದೆಯಲ್ಲಿ ಮುಂದುವರಿಯುತ್ತಾರೆ’ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಜನಾರ್ದನ ದ್ವಿವೇದಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದರೊಂದಿಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಜಿ.ಪರಮೇಶ್ವರ್ ಸೇರಿದಂತೆ ದೇಶದ ಎಲ್ಲಾ ರಾಜ್ಯಗಳ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರು ತಮ್ಮ ಹುದ್ದೆಯಲ್ಲಿ ನಿರಾತಂಕವಾಗಿ ಮುಂದುವರೆಯಲಿದ್ದಾರೆ. ಈ ಹಿಂದೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಹುದ್ದೆ ಮತ್ತು ಸಚಿವ ಹುದ್ದೆ ಎರಡನ್ನೂ ಡಾ.ಜಿ.ಪರಮೇಶ್ವರ್ ಹೊಂದಿದ್ದರು.

ಬಳಿಕ 2018ರ ಚುನಾವಣೆ ಗಮನದಲ್ಲಿಟ್ಟುಕೊಂಡ ಪಕ್ಷದ ಹೈಕಮಾಂಡ್, ಸಿದ್ದರಾಮಯ್ಯ ಅವರನ್ನೇ ಮುಂದಿನ ಚುನಾವಣೆಗೂ ಪಕ್ಷದ ಸಿಎಂ ಅಭ್ಯರ್ಥಿ ಎಂದು ಘೋಷಿಸಿತ್ತು. ಜೊತೆಗೆ ಪರಮೇಶ್ವರ್ ಅವರಿಗೆ ಸಚಿವ ಹುದ್ದೆಗೆ ರಾಜೀನಾಮೆ ನೀಡಿ, ಪಕ್ಷದ ಸಂಘಟನೆಗೆ ಹೆಚ್ಚಿನ ಗಮನ ಹರಿಸುವಂತೆ ಸೂಚಿಸಿತ್ತು. ಹೀಗಾಗಿ 2017ರ ಜೂನ್‌ನಲ್ಲಷ್ಟೇ ಪರಮೇಶ್ವರ್ ಸಚಿವ ಹುದ್ದೆಗೆ ರಾಜೀನಾಮೆ ನೀಡಿದ್ದರು.

click me!