
ಕೋಲಾರ : ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರ ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆಂದು ಆರೋಪಿಸಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಸಲ್ಲಿಸಿದ ದೂರು ರಾಜಕೀಯ ಪ್ರೇರಿತ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಹೇಳಿದರು.
ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯ ಸರ್ಕಾರ ಅಧಿಕಾರಿಗಳನ್ನು ದುರುಪಯೋಗ ಮಾಡಿಕೊಳ್ಳುವ ಆರೋಪದಲ್ಲಿ ಹುರುಳಿಲ್ಲ. ಸಿಎಂ ಸಿದ್ದರಾಮಯ್ಯ ವಿರುದ್ಧ ಎಚ್.ಡಿ.ದೇವೇಗೌಡರು ಚುನಾವಣೆ ಆಯೋಗಕ್ಕೆ ದೂರು ನೀಡಿರುವ ವಿಚಾರ ಕೇವಲ ರಾಜಕೀಯ ಪ್ರೇರಿತವಾದುದು. ಅವರು ದೂರು ಕೊಟ್ಟಮಾತ್ರಕ್ಕೆ ಎಲ್ಲವೂ ನಿಜವಾಗುವುದಿಲ್ಲ, ಚುನಾವಣಾ ಆಯೋಗ ತನಿಖೆ ನಡೆಸಿ ಕ್ರಮ ತೆಗೆದುಕೊಳ್ಳಲಿ ಎಂದರು.
ಇನ್ನು ಮಾಜಿ ಸಚಿವ ಕೆ.ಶ್ರೀನಿವಾಸ ಗೌಡ ಅವರು ಜೆಡಿಎಸ್‌ನಿಂದ ಕಾಂಗ್ರೆಸ್ ಸೇರ್ಪಡೆ ವಿಚಾರಕ್ಕೆ ಸಂಬಂಧಿಸಿ ಸ್ಪಷ್ಟನೆ ನೀಡಿದ ಪರಮೇಶ್ವರ್, ಈ ಕುರಿತು ಯಾವುದೇ ಚರ್ಚೆಯಾಗಿಲ್ಲ. ಅಂತಹ ಬೆಳವಣಿಗೆ ನನ್ನ ಗಮನಕ್ಕೂ ಬಂದಿಲ್ಲ. ಕಾಂಗ್ರೆಸ್‌ಗೆ ಯಾರು ಬೇಕಾದರೂ ಬರಬಹುದು, ಆದರೆ ನಾವು ಯಾರಿಗೂ ಯಾವುದೇ ಭರವಸೆ ನೀಡುವುದಿಲ್ಲ. ಈ ಕುರಿತು ಸುಮ್ಮನೇ ಉಹಾಪೋಹ ಸೃಷ್ಟಿಮಾಡಲಾಗುತ್ತಿದೆ ಎಂದರು
ಸಿದ್ದರಾಮಯ್ಯ, ಅಧಿಕಾರಿಗಳು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆಂದು ಆರೋಪಿಸಿ ದೇವೇಗೌಡ ಸಲ್ಲಿಸಿದ ದೂರು ರಾಜಕೀಯ ಪ್ರೇರಿತ. ಅವರು ದೂರು ಕೊಟ್ಟಮಾತ್ರಕ್ಕೆ ಎಲ್ಲವೂ ನಿಜವಾಗಲ್ಲ, ಚುನಾವಣಾ ಆಯೋಗ ತನಿಖೆ ನಡೆಸಿ ಕ್ರಮ ತೆಗೆದುಕೊಳ್ಳಲಿ.
- ಪರಮೇಶ್ವರ, ಕೆಪಿಸಿಸಿ ಅಧ್ಯಕ್ಷ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.