ಜಾರಕಿಹೊಳಿ ಬ್ರದರ್ಸ್‌ಗೆ ಎಚ್ಚರಿಕೆಯ ಸಂದೇಶ ರವಾನಿಸಿದ ಪರಂ

Published : Sep 13, 2018, 03:42 PM ISTUpdated : Sep 19, 2018, 09:24 AM IST
ಜಾರಕಿಹೊಳಿ ಬ್ರದರ್ಸ್‌ಗೆ ಎಚ್ಚರಿಕೆಯ ಸಂದೇಶ ರವಾನಿಸಿದ ಪರಂ

ಸಾರಾಂಶ

 ಜಾರಕಿಹೊಳಿ ಬ್ರದರ್ಸ್ ಬೆಳವಣಿಗೆಯ ಕುರಿತು ಕೆಲ ಕಾಂಗ್ರೆಸ್ ನಾಯಕರ ಕಣ್ಣು ಕೆಂಪಾಗುವಂತೆ ಮಾಡಿದಂತೂ ಸತ್ಯ. ಇದಕ್ಕೆ ಪೂರಕವೆಂಬಂತೆ ರಮೇಶ್ ಹಾಗೂ ಸತೀಶ್ ಜಾರಕಿಹೊಳಿ ಅವರಿಂದ ಕಳೆದೊಂದು ವಾರದಿಂದ ರಾಜ್ಯದಲ್ಲಿ ನಡೆಯುತ್ತಿರುವ ಅನಿರೀಕ್ಷಿತ ರಾಜಕೀಯ ಬೆಳವಣಿಗೆ ಕುರಿತು ಉಪಮುಖ್ಯಂತ್ರಿ ಡಾ,ಜಿ, ಪರಮೇಶ್ವರ್ ಕೆಂಡಾಮಂಡಲರಾಗಿದ್ದಾರೆ.

ಬೆಂಗಳೂರು, (ಸೆ.13): ಮಾಜಿ ಸಿಎಂ ಸಿದ್ದರಾಮಯ್ಯ ಅವರು ಯುರೋಪ್ ಪ್ರವಾಸದಲ್ಲಿರುವ ಸಮಯದಲ್ಲಿ ರಾಜ್ಯದಲ್ಲಿ ಸಾಕಷ್ಟು ರಾಜಕೀಯ ಬೆಳವಣಿಗೆಗಳು ನಡೆಯುತ್ತಿವೆ ಬೆಳಗಾವಿಯ ಪಿಎಲ್ ಡಿ ಬ್ಯಾಂಕ್ ಚುನಾವಣೆಯಲ್ಲಿ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಬಣ ಗೆದ್ದು, ಜಾರಕಿಹೊಳಿ ಬ್ರದರ್ಸ್ ಗೆ ಮುಖಭಂಗವಾದ ನಂತರ ಕರ್ನಾಟಕ ರಾಜಕೀಯದ ಚಿತ್ರಣ ಅಲ್ಲಾಡುತ್ತಿದೆ.

 ಜಾರಕಿಹೊಳಿ ಬ್ರದರ್ಸ್ ಬೆಳವಣಿಗೆಯ ಕುರಿತು ಕೆಲ ಕಾಂಗ್ರೆಸ್ ನಾಯಕರ ಕಣ್ಣು ಕೆಂಪಾಗುವಂತೆ ಮಾಡಿದಂತೂ ಸತ್ಯ. ಇದಕ್ಕೆ ಪೂರಕವೆಂಬಂತೆ ರಮೇಶ್  ಹಾಗೂ ಸತೀಶ್ ಜಾರಕಿಹೊಳಿ ಅವರಿಂದ ಕಳೆದೊಂದು ವಾರದಿಂದ ರಾಜ್ಯದಲ್ಲಿ ನಡೆಯುತ್ತಿರುವ ಅನಿರೀಕ್ಷಿತ ರಾಜಕೀಯ ಬೆಳವಣಿಗೆ ಕುರಿತು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಕೆಂಡಾಮಂಡಲರಾಗಿದ್ದಾರೆ. "

ಸದ್ಯ ನಡೆಯುತ್ತಿರುವ ರಾಜಕೀಯ ವಿದ್ಯಾಮಾನಗಳ ಕುರಿತು ಚರ್ಚಿಸಲು ಪರಂ, ಗುರುವಾರ  ಜೆಡಿಎಸ್ ವರಿಷ್ಠ ಎಚ್. ಡಿ. ದೇವೇಗೌಡರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದರು. ಬಳಿಕ ಸುದ್ದಿಗಾರೊಂದಿಗೆ ಮಾತನಾಡಿದ ಪರಮೇಶ್ವರ, ಇಂಥಾ ಏಳು-ಬೀಳುಗಳನ್ನ ಕಾಂಗ್ರೆಸ್​ ಸಾಕಷ್ಟು ನೋಡಿದೆ. ತಮ್ಮ ಕ್ಷೇತ್ರದ ಬಗ್ಗೆ ಇರುವ ಭಿನ್ನಾಭಿಪ್ರಾಯಗಳನ್ನು ನಮ್ಮೊಂದಿಗೆ ಹಂಚಿಕೊಳ್ಳಲಿ. ಭಿನ್ನಮತಕ್ಕೆ ಕಡಿವಾಣ ಹಾಕುತ್ತೇವೆ  ಅದನ್ನು ಬಿಟ್ಟು  ಸರ್ಕಾರಕ್ಕೆ ಮತ್ತು ಪಕ್ಷಕ್ಕೆ ಮುಜುಗರವಾಗುವ ರೀತಿಯಲ್ಲಿ ನಡೆದುಕೊಳ್ಳಬಾರದು.ಇದ್ಯಾವುದು ನಡೆಯಲ್ಲ ಎಂದು ಪರಂ ಜಾರಕಿಹೊಳಿ ಸಹೋದರರಿಗೆ ಪರೋಕ್ಷವಾಗಿ ಎಚ್ಚರಿಕೆ ನೀಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸೀರಿಯಲ್‌ ನಟಿ ಅ*ತ್ಯಾಚಾರ ಮಾಡಿ ಬೆದರಿಸಿ ಮದುವೆ, ಈಗ ನಡುರಸ್ತೆಯಲ್ಲಿಯೇ ಅತ್ತೆ-ಮಾವನ ಮೇಲೆ ಹಲ್ಲೆ!
2 ತಿಂಗಳ ಗೃಹಲಕ್ಷ್ಮಿ ಹಣ ಎಲ್ಲಿಗೆ ಹೋಯ್ತು?, ವಿಪಕ್ಷಗಳ ಆಕ್ರೋಶಕ್ಕೆ ಹೆಬ್ಬಾಳ್ಕರ್ ಭಾವುಕ, ನಾನು ಮಹಿಳೆ ಎಂಬ ಕಾರಣಕ್ಕೆ ಹೀಗೆ ಮಾಡ್ತೀರಾ ಎಂದ ಸಚಿವೆ