
ಬೆಂಗಳೂರು(ಜುಲೈ 24): ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲು ಅವ್ಯವಹಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಿವೃತ್ತ ಐಎಎಸ್ ಅಧಿಕಾರಿ ಒಳಗೊಂಡ ತಂಡವು ವರದಿ ಸಿದ್ಧಪಡಿಸಿದೆ. ನಿವೃತ್ತ ಐಎಎಸ್ ಅಧಿಕಾರಿ ವಿನಯ್ ಕುಮಾರ್ ನೇತೃತ್ವದ ತನಿಖಾ ತಂಡವು ಇಂದು ಸೋಮವಾರ ಸಂಜೆಯೊಳಗೆ ಸರ್ಕಾರಕ್ಕೆ ವರದಿ ಸಲ್ಲಿಸುವ ಸಾಧ್ಯತೆ ಇದೆ ಎನ್ನಲಾಗ್ತಿದೆ. ಡಿಐಜಿ ರೂಪಾ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಮತ್ತಷ್ಟು ಸಾಕ್ಷ್ಯಗಳನ್ನು ಕಲೆ ಹಾಕಿರುವ ತಂಡದ ವರದಿಯು ಗೃಹ ಇಲಾಖೆ ಹಾಗೂ ಸಿಎಂ ಸಿದ್ದರಾಮಯ್ಯ ಅವರ ಕೈಸೇರಲಿದೆ.
ಪ್ರಾಥಮಿಕ ವರದಿ ನೀಡಲು ಸರ್ಕಾರ ಒಂದು ವಾರ ಗಡುವು ನೀಡಿತ್ತು. ರೂಪ ಮಾಡಿದ್ದ ಆರೋಪಕ್ಕೆ ಸಂಬಂಧಿಸಿದ ಪೂರಕ ಸಾಕ್ಷ್ಯಗಳ ಸಮೇತ ವರದಿ ಸಲ್ಲಿಕೆ ಸಾಧ್ಯತೆಯಿದೆ. ಹೆಚ್ಚಿನ ತನಿಖೆಯನ್ನು ಸಿಐಡಿಗೆ ವಹಿಸುವಂತೆ ತಂಡವು ಶಿಫಾರಸು ಮಾಡಿರುವುದಾಗಿ ಮೂಲಗಳು ಮಾಹಿತಿ ನೀಡಿವೆ. ಶಶಿಕಲಾ, ತೆಲಗಿಗೆ ಐಷಾರಾಮಿ ಜೀವನಕ್ಕೆ ಸಹಕಾರ ನೀಡಿದ ಅಧಿಕಾರಿಗಳಿಗೆ ಸದ್ಯದಲ್ಲಿ ಸಂಕಷ್ಟ ಸಾಧ್ಯತೆ ಎದುರಾಗಲಿದೆ ಎನ್ನಲಾಗ್ತಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.