
ಮೊಮೊಸ್ ತಿಂದ ಇಬ್ಬರು ಹಾಸ್ಟೆಲ್ ವಿದ್ಯಾರ್ಥಿಗಳು ಅನಾರೋಗ್ಯಕ್ಕೆ ಒಳಗಾಗಿ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಬಂಡಾದ ಖಾಸಗಿ ವಸತಿ ಶಾಲೆಯಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಗಳಿಗೆ 08 ಮತ್ತು 12 ವರ್ಷ ವಯಸ್ಸಗಿತ್ತು. ಇಬ್ಬರು ಮೊಮೊಸ್ ಅನ್ನು ಚಟ್ನಿ ಜೊತೆ ಸೇವಿಸಿದ್ದರು. ಇದಾದ ಕೆಲವೇ ಕ್ಷಣಗಳಲ್ಲಿ ಅವರಿಗೆ ಅನಾರೋಗ್ಯ ಎದುರಾಗಿತ್ತು. ಇದಾದ ಕೆಲವೇ ಗಂಟೆಗಳಲ್ಲಿ ವಿದ್ಯಾರ್ಥಿಗಳಿಬ್ಬರು ಸಾವನ್ನಪ್ಪಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ವಿದ್ಯಾರ್ಥಿಗಳ ಸಾವಿನ ಬಗ್ಗೆ ಪೋಷಕರು ತನಿಖೆ ಕೈಗೊಂಡಿದ್ದು, ಸಾವಿನ ನಿಖರ ಕಾರಣ ತಿಳಿದುಕೊಳ್ಳಲು ಮೃತದೇಹಳ ಮರಣೋತ್ತರ ಪರೀಕ್ಷೆಗೆ ಒಳಪಡಿಸಲಾಗಿದೆ. ಬಂಡಾದ ಕೊತ್ವಲಿ ನಗರದ ಜೀಲ್ ಕಾ ಪೂರ್ವಾದಲ್ಲಿರುವ ಖಾಸಗಿ ವಸತಿ ಶಾಲೆಯಲ್ಲಿ ದುರ್ಘಟನೆ ಸಂಭವಿಸಿದೆ. ಮೃತ ವಿದ್ಯಾರ್ಥಿಗಳಿಬ್ಬರು ವಸತಿ ಶಾಲಿಯಲ್ಲಿ ಉಳಿದುಕೊಂಡು ಓದುತ್ತಿದ್ದರು.
12 ವರ್ಷದ ನಿತಿನ್, ಗಿರ್ವಾನ್ ಪೊಲೀಸ್ ಠಾಣಾ ವ್ಯಾಪ್ತಿಯ ಸರಸ್ವ ನಿವಾಸಿ ಎಂದು ತಿಳಿದು ಬಂದಿದೆ. 08 ವರ್ಷ ಅರುಣ್ ಕುಮಾರ್, ತಿಂಡ್ವಾರಿ ಪಟ್ಟಣದ ನಿವಾಸಿಯಾಗಿದ್ದ ಪುಷ್ಕರ್ ಅವರ ಪುತ್ರ ಎಂದು ವರದಿಯಾಗಿದೆ.
ರಾಷ್ಟ್ರೀಯ ಮಾಧ್ಯಮಗಳ ಅನ್ವಯ, ಭಾನುವಾರ ರಾತ್ರಿ ಇಬ್ಬರು ಮಕ್ಕಳು ಏಕಾಏಕಿ ಅಸ್ವಸ್ಥರಾಗಿದ್ದು, ಕೂಡಲೇ ಶಾಲಾ ಆಡಳಿತ ಮಂಡಳಿ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸುವ ಪ್ರಯತ್ನ ಮಾಡಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಬ್ಬರು ಸಾವನ್ನಪ್ಪಿದ್ದಾರೆ. ಬಂಡಾ ಎಎಸ್‌ಪಿ ಶಿವರಾಜ್ ನೀಡಿರುವ ಮಾಹಿತಿ ಅನ್ವಯ, ಜಿಲ್ಲಾಸ್ಪತ್ರೆಯಲ್ಲಿ ಒಂದು ಮಗು ಸಾವನ್ನಪ್ಪಿದ್ದು, ಮತ್ತೋರ್ವ ವಿದ್ಯಾರ್ಥಿ ಬಂಡಾ ವೈದ್ಯಕೀಯ ಕಾಲೇಜಿನಲ್ಲಿ ಮೃತಪಟ್ಟಿದ್ದಾನೆ ಎಂದು ಘೋಷಿಸಿದ್ದರು.
ಆಗಸ್ಟ್ 16ರ ಸಂಜೆ ಇಬ್ಬರು ಫಿಂಗರ್ ಚಟ್ನಿಯೊಂದಿಗೆ ಮೊಮೊಸ್ ಸೇವಿಸಿದ್ದರು ಎಂದು ಕುಟುಂಸ್ಥರು ತಿಳಿಸಿದ್ದಾರೆ. ಮೊಮೊಸ್ ಸೇವಿಸದ ಬಳಿಕವೇ ಮಕ್ಕಳಿಗೆ ಹೊಟ್ಟೆ ನೋವು ಕಾಣಿಸಿಕೊಂಡು, ಅನಾರೋಗ್ಯ ಉಂಟಾಗಿತ್ತು ಎಂದು ತಿಳಿಸಿದ್ದಾರೆ. ಸಾವಿಗೆ ನಿಖರ ಕಾರಣ ತಿಳಿದು ಬರಬೇಕಿದ್ದು, ಮೊಲ್ನೋಟ್ಟಕ್ಕೆ ಫುಡ್ ಪಾಯಿಸನ್‌ನಿಂದ ಸಾವು ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ. ಆದರೆ ಮಕ್ಕಳ ಮರಣೋತ್ತರ ವರದಿ ಬಂದ ಬಳಿಕವೇ ಸಾವಿಗೆ ನಿಖರ ಕಾರಣ ತಿಳಿದು ಬರಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.