ಶಾಲಾ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಪೋಷಕರಿಂದ ಪ್ರತಿಭಟನೆ

Published : Feb 26, 2017, 03:27 PM ISTUpdated : Apr 11, 2018, 12:34 PM IST
ಶಾಲಾ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಪೋಷಕರಿಂದ ಪ್ರತಿಭಟನೆ

ಸಾರಾಂಶ

ಪ್ರತಿಭಟನಾ ಸ್ಥಳಕ್ಕೆ ಧಾವಿಸಿದ ಹೆಚ್ಚುವರಿ ಪೊಲೀಸ್​ ಆಯುಕ್ತ ಹೇಮಂತ್​ ನಿಂಬಾಳ್ಕರ್​, ಪ್ರತಿಭಟನಕಾರರಿಗೆ ತನಿಖಾ ಮಾಹಿತಿ ನೀಡಿದರು. ಅಲ್ಲದೆ, ತಪ್ಪಿತಸ್ಥರ ವಿರುದ್ಧ ಕ್ರಮ ತೆಗದುಕೊಂಡಿದ್ದು, ಯಾವೊಬ್ಬ ಆರೋಪಿಯನ್ನೂ ತಪ್ಪಿಸಿಕೊಳ್ಳಲು ಬಿಡುವುದಿಲ್ಲ ಎಂದು ಭರವಸೆ ನೀಡಿದ್ದಾರೆ. 

ಬೆಂಗಳೂರು (ಫೆ.26): ಬೆಂಗಳೂರಿನ ಮಾರತ್ತಹಳ್ಳಿ ಪ್ರತಿಷ್ಠಿತ ಶಾಲೆಯಲ್ಲಿ ಮೂರು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ಖಂಡಿಸಿ ಪೋಷಕರು ಹಾಗೂ ಸ್ಥಳೀಯರು ಇಂದೂ ಕೂಡ ಪ್ರತಿಭಟನೆ ನಡೆಸಿದರು.

ಹೆಚ್’ಎಎಲ್​ ಠಾಣೆ ಹಿಂಭಾಗದಲ್ಲಿ ಸೇರಿದ ನೂರಾರು ಮಂದಿ, ಆರೋಪಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಒತ್ತಾಯಿಸಿದ್ದಾರೆ.

ಶಾಲಾ ಆಡಳಿತ ಮಂಡಳಿ ವಿರುದ್ಧವೂ ಸೂಕ್ತ ಕ್ರಮತೆಗದುಕೊಂಡು ಮತ್ತೆ ಇಂತಹ  ಪ್ರಕರಣ ಮರುಕಳಿಸದಂತೆ ಕ್ರಮ ತೆಗೆದುಕೊಳ್ಳುವಂತೆ ಒತ್ತಾಯಿಸಿದರು.

ಪ್ರತಿಭಟನಾ ಸ್ಥಳಕ್ಕೆ ಧಾವಿಸಿದ ಹೆಚ್ಚುವರಿ ಪೊಲೀಸ್​ ಆಯುಕ್ತ ಹೇಮಂತ್​ ನಿಂಬಾಳ್ಕರ್​, ಪ್ರತಿಭಟನಕಾರರಿಗೆ ತನಿಖಾ ಮಾಹಿತಿ ನೀಡಿದರು. ಅಲ್ಲದೆ, ತಪ್ಪಿತಸ್ಥರ ವಿರುದ್ಧ ಕ್ರಮ ತೆಗದುಕೊಂಡಿದ್ದು, ಯಾವೊಬ್ಬ ಆರೋಪಿಯನ್ನೂ ತಪ್ಪಿಸಿಕೊಳ್ಳಲು ಬಿಡುವುದಿಲ್ಲ ಎಂದು ಭರವಸೆ ನೀಡಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Mysore: ಗೌರವ ಕೊಡದ ಹೆಂಡ್ತಿ ಕೊಲ್ಲಲು ಸುಪಾರಿ ಕೊಟ್ಟ ಪತಿರಾಯ!
ರಹಸ್ಯ ಡಿನ್ನರ್ ಮೀಟಿಂಗ್‌ನಲ್ಲಿ 'ಅಹಿಂದ' ಮಾಸ್ಟರ್ ಪ್ಲಾನ್! ಸಿಎಂ ಕುರ್ಚಿ ಉಳಿಸಿಕೊಳ್ಳಲು ಬೆಳಗಾವಿಯಲ್ಲಿ ಹೊಸ ರಣತಂತ್ರ?