
ನವದೆಹಲಿ (ಡಿ.06): ನಿನ್ನೆ ರಾತ್ರಿ ಕೊನೆಯುಸಿರೆಳೆದ ತಮಿಳುನಾಡು ಮುಖ್ಯಮಂತ್ರಿ ಜಯಾಲಲಿತಾ ಅವರಿಗೆ ಸಂಸತ್ತಿನಲ್ಲಿಂದು ಶ್ರದ್ದಾಂಜಲಿ ಸಲ್ಲಿಸಲಾಯಿತು. ಬಳಿಕ ಇಂದಿನ ಸಂಸತ್ತು ಕಲಾಪಗಳನ್ನು ಮುಂದೂಡಲಾಯಿತು.
ಲೋಕಸಭೆ ಹಾಗೂ ರಾಜ್ಯಸಭೆ ಕಲಾಪಗಳನ್ನು ನಾಳೆಗೆ ಮುಂದೂಡಲಾಗಿದೆ. ಜಯಾ ನಿಧನದ ಹಿನ್ನೆಲೆಯಲ್ಲಿ ಕೆಂದ್ರ ಸರ್ಕಾರ ಈಗಾಗಲೇ ಒಂದು ದಿನದ ಶೋಕಾಚರಣೆ ಘೋಷಿಸಿದೆ.
ತಮಿಳುನಾಡು ಸರ್ಕಾರ ರಾಜ್ಯದ ಎಲ್ಲ ಶಾಲಾ-ಕಾಲೇಜುಗಳಿಗೆ 3 ದಿನ ರಜೆ ಘೋಷಿಸಿದೆ ಹಾಗೂ ರಾಜ್ಯದಲ್ಲಿ 7 ದಿನ ಶೋಕಾಚರಣೆ ನಡೆಯಲಿದೆ.
ಕರ್ನಾಟಕ ಸೇರಿದಂತೆ, ಪಕ್ಕದ ಪಾಂಡಿಚೇರಿ, ಕೇರಳ, ಉತ್ತರಾಖಂಡ ಹಾಗೂ ಬಿಹಾರ ರಾಜ್ಯಗಳೂ ಒಂದು ದಿನದ ಶೋಕಾಚರಣೆಯನ್ನು ಆಚರಿಸುತ್ತಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.