
ನವದೆಹಲಿ (ನ.21): ಕೇಂದ್ರ ಸರ್ಕಾರದ ನೋಟು ಅಪಮೌಲ್ಯೀಕರಣ ಕ್ರಮವು ಇಂದಿನ ಲೋಕಸಭೆಯ ಕಲಾಪವನ್ನು ಕೂಡಾ ಬಲಿತೆಗೆದುಕೊಂಡಿದೆ.
ನೋಟು ನಿಷೇಧ ಕ್ರಮದಿಂದಾಗಿ 70 ಮಂದಿ ಈವರೆಗೆ ಮೃತಪಟ್ಟಿದ್ದಾರೆ, ಅವರಿಗೂ ಕೂಡಾ ಸದನದಲ್ಲಿ ಸಂತಾಪ ಸೂಚಿಸಬೇಕೆಂದು ಪ್ರತಿಪಕ್ಷಗಳು ಆಗ್ರಹಿಸಿವೆ.
ಅಪಮೌಲ್ಯೀಕರಣ ಕ್ರಮದ ಬಗ್ಗೆ ರಾಜ್ಯಸಭೆಯಲ್ಲಿ ಪ್ರತಿಪಕ್ಷಗಳು ಒಗ್ಗಟ್ಟಾಗಿ ಕೇಂದ್ರ ಸರ್ಕಾರದ ವಿರುದ್ಧ ದಾಳಿ ನಡೆಸಿದ್ದು, ಸರ್ಕಾರದ ಕ್ರಮದ ಬಗ್ಗೆ ಖುದ್ದು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರೇ ಉತ್ತರಿಸಬೇಕೆಂದು ಪಟ್ಟುಹಿಡಿದಿವೆ.
ಸರ್ಕಾರದ ಕ್ರಮದ ಬಗ್ಗೆ ಪ್ರಧಾನಿ ಮೋದಿ ಸಂಸತ್ತಿನಲ್ಲಿ ಸ್ಪಷ್ಟನೆ ನೀಡಬೇಕು. ದೇಶದ ಇತರ ಎಲ್ಲಾ ಕಡೆ ಅವರು ಸುತ್ತುತ್ತಿದ್ದಾರೆ, ಆದರೆ ಸಂಸತ್ತಿಗೆ ಬಂದು ಸ್ಪಷ್ಟನೆ ನೀಡಲು ಹಿಂದೇಟು ಹಾಕುತ್ತಿದ್ದಾರೆ ಎಂದು ಕಮ್ಯೂನಿಸ್ಟ್ ಪಕ್ಷದ ನಾಯಕ ಸೀತರಾಮ್ ಯೆಚೂರಿ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.