
ನವದೆಹಲಿ(ಸೆ.25): ಚುನಾವಣೆಗಳಲ್ಲಿ ಕಳಂಕಿತ ರಾಜಕಾರಣಿಗಳ ಸ್ಪರ್ಧೆಯನ್ನು ನಿರ್ಬಂಧಿಸಲು ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ.
ಕಳಂಕಿತ ರಾಜಕಾರಣಿಗಳ ಸ್ಪರ್ಧೆಯನ್ನು ನಿರ್ಬಂಧಿಸುವುದು ಸುಪ್ರೀಂ ಕೋರ್ಟ್ ಕೆಲಸವಲ್ಲ ಎಂದು ಮುಖ್ಯ ನ್ಯಾಯಾಧೀಶರಾದ ದೀಪಕ್ ಮಿಶ್ರಾ ನೇತೃತ್ವದ ಪೀಠ ತೀರ್ಪು ನೀಡಿದೆ.
ದೋಷಾರೋಪ ಎದುರಿಸುತ್ತಿರುವವರ ಸ್ಪರ್ಧೆಗೆ ನಿರ್ಬಂಧ ಹೇರಬೇಕು ಮತ್ತು ಅಂತಹ ಅಭ್ಯರ್ಥಿಗಳನ್ನು ಅನರ್ಹಗೊಳಿಸಬೇಕೆಂಬ ಅರ್ಜಿಗೆ ಸಂಬಂಧಿಸಿದಂತೆ ದೀಪಕ್ ಮಿಶ್ರಾ ಅವರು ತೀರ್ಪು ನೀಡಿದ್ದು, ಚಾರ್ಚ್ ಶೀಟ್ ಆಧರಿಸಿ ಅಭ್ಯರ್ಥಿಗಳನ್ನು ಅನರ್ಹಗೊಳಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ಕಳಂಕಿತ ರಾಜಕಾರಣಿಗಳ ಸ್ಪರ್ಧೆ ಕುರಿತಂತೆ ಸಂಸತ್ ನಲ್ಲಿ ನಿರ್ಧಾರ ಕೈಗೊಳ್ಳಬೇಕು. ಈ ಕುರಿತು ಕಾನೂನು ರೂಪಿಸಬೇಕು. ಅಲ್ಲದೇ ಜನರೇ ರಾಜಕಾರಣಿಗಳ ಹಣೆಬರಹ ನಿರ್ಧರಿಸಬೇಕು. ಕಳಂಕ ರಹಿತ ಅಭ್ಯರ್ಥಿಗಳನ್ನು ಚುನಾಯಿಸುವ ಅಧಿಕಾರ ಮತದಾರರಿಗಿರುವುದರಿಂದ ಅವರೇ ಉತ್ತಮ ಅಭ್ಯರ್ಥಿಗಳನ್ನು ಗೆಲ್ಲಿಸಬೇಕು ಎಂದು ಹೇಳಿದರು.
ಇನ್ನು ಕಳಂಕಿತ ರಾಜಕೀಯ ನಾಯಕರು ಚುನಾವಣೆಯಲ್ಲಿ ಸ್ಪರ್ಧಿಸುವ ಮುನ್ನ ತಮ್ಮ ಕ್ರಿಮಿನಲ್ ಪ್ರಕರಣಗಳನ್ನು ಘೋಷಿಸಬೇಕು. ಮತದಾರರಿಗೆ ಅಭ್ಯರ್ಥಿಗಳು ತಮ್ಮ ಮೇಲಿನ ಕ್ರಿಮಿನಲ್ ಕೇಸ್ ಗಳ ಕುರಿತು ಮಾಧ್ಯಮ, ಸಾಮಾಜಿಕ ಜಾಲಾತಣಗಳ ಮೂಲಕ ಮಾಹಿತಿ ನೀಡಬೇಕು ಎಂದರು.
ಭ್ರಷ್ಟಾಚಾರ ಒಂದು ರಾಷ್ಟ್ರೀಯ ಆರ್ಥಿಕ ಭಯೋತ್ಪಾದನೆಯಾಗಿದೆ. ಇದನ್ನು ಮಟ್ಟ ಹಾಕುವುದು ಮತದಾರರ ಕೈಯಲ್ಲಿದೆ. ಸುಪ್ರಿಂಕೋರ್ಟ್ ಕಳಂಕಿತ ಅಭ್ಯರ್ಥಿಗಳು ಸ್ಪರ್ಧಿಸದಂತೆ ಅನರ್ಹಗೊಳಿಸುವುದಿಲ್ಲ. ಅನರ್ಹಗೊಳಿಸುವುದನ್ನು ಮಾನದಂಡವಾಗಿಸಲು ಸಾಧ್ಯವಿಲ್ಲ ಎಂದು ದೀಪಕ್ ಮಿಶ್ರಾ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.