ಮೋದಿ, ರಾಹುಲ್ ಇಬ್ಬರಿಗೂ ಎದುರಾಯ್ತು ಸಂಕಷ್ಟ

By Web DeskFirst Published Dec 18, 2018, 7:32 AM IST
Highlights

ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಹುಲ್ ಗಾಂಧಿ ಇಬ್ಬರಿಗೂ ಸಂಕಷ್ಟ ಎದುರಾಗಿದೆ. ಬಿಜೆಪಿ ಮುಖಂಡರು ರಾಹುಲ್ ಗಾಂಧಿ ವಿರುದ್ಧ ಹಕ್ಕುಚ್ಯುತಿ ಮಂಡಿಸಿದ್ದು, ಕಾಂಗ್ರೆಸ್ ಮುಖಂಡರು ರಾಹುಲ್ ವಿರುದ್ಧ ಹಕ್ಕುಚ್ಯುತಿ ಮಂಡಿಸಿದ್ದಾರೆ. 

ನವದೆಹಲಿ: ನವದೆಹಲಿ: ರಫೇಲ್ ವಿವಾದಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ಮತ್ತು ರಾಹುಲ್‌ಗಾಂಧಿ ವಿರುದ್ಧ ಬಿಜೆಪಿ ಹಕ್ಕುಚ್ಯುತಿ ಮಂಡಿಸಿವೆ. 

ರಫೇಲ್‌ನಲ್ಲಿ ಅಕ್ರಮ ನಡೆದಿದೆ ಎಂದು ರಾಹುಲ್ ಆರೋಪಿಸಿ ಸದನದ ದಿಕ್ಕುತಪ್ಪಿಸಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ. ಹಾಗೆಯೇ ಸುಪ್ರೀಂಕೋರ್ಟ್ ಕೇಂದ್ರ ಸುಳ್ಳು ಮಾಹಿತಿ ನೀಡಿದೆ ಎಂದು ಕಾಂಗ್ರೆಸ್ ಆರೋಪಿಸಿ ಮೋದಿ ವಿರುದ್ಧ ಹಕ್ಕುಚ್ಯುತಿ ನೋಟಿಸ್ ನೀಡಿದೆ. 

 ಈ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ನಡುವೆ ‘ಹಕ್ಕುಚ್ಯುತಿ ಸಮರ’ ಆರಂಭವಾಗಿದೆ. 

ರಾಹುಲ್‌ ಗಾಂಧಿ ಅವರು ರಫೇಲ್‌ ಖರೀದಿಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಸದನದ ದಿಕ್ಕು ತಪ್ಪಿಸಿದ್ದಾರೆ ಎಂದು ಬಿಜೆಪಿಯ ಮೂವರು ಸಂಸದರು ಹಕ್ಕಚ್ಯುತಿ ನೋಟಿಸ್‌ ಜಾರಿ ಮಾಡಿದ್ದಾರೆ. 

ಇದೇ ವೇಳೆ, ಪ್ರಧಾನಿ ನರೇಂದ್ರ ಮೋದಿ ಅವರು ರಫೇಲ್‌ ಕುರಿತ ಸಿಎಜಿ ವರದಿಯನ್ನು ಮಂಡಿಸಲಾಗಿದೆ ಎಂದು ಸುಪ್ರೀಂ ಕೋರ್ಟ್‌ಗೆ ಸುಳ್ಳು ಹೇಳಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್‌ನ ಸುನೀಲ್‌ ಜಾಖಡ್‌ ಹಕ್ಕುಚ್ಯುತಿ ನೋಟಿಸ್‌ ನೀಡಿದ್ದಾರೆ. ಉಭಯ ನೋಟಿಸ್‌ಗಳು ತಮ್ಮ ಪರಿಶೀಲನೆಯಲ್ಲಿವೆ ಎಂದು ಸ್ಪೀಕರ್‌ ಸುಮಿತ್ರಾ ಮಹಾಜನ್‌ ಹೇಳಿದ್ದಾರೆ.

click me!