
ನವದೆಹಲಿ: ಗುಜರಾತ್ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಸಂಸತ್ತಿನ ಚಳಿಗಾಲದ ಅಧಿವೇಶನವನ್ನು ನಡೆಸಲು ಕೇಂದ್ರ ಸರ್ಕಾರ ಹಿಂದೇಟು ಹಾಕುತ್ತಿದೆ ಎಂಬ ಪ್ರತಿಪಕ್ಷಗಳ ಆರೋಪ ಬೆನ್ನಲ್ಲೇ, ಗುಜರಾತ್ ವಿಧಾನಸಭೆ ಚುನಾವಣೆಯ ಎರಡನೇ ಹಂತದ ಮತದಾನ ಮುಗಿದ ಮರುದಿನದಿಂದ ಅಧಿವೇಶನ ನಡೆಸಲು ಸರ್ಕಾರ ತೀರ್ಮಾನ ಕೈಗೊಂಡಿದೆ.
ಡಿ.15ರಿಂದ ಜ.೫ರವರೆಗೆ ಒಟ್ಟು 14 ದಿನಗಳ ಕಾಲ ಚಳಿಗಾಲದ ಅಧಿವೇಶನ ನಡೆಸಲು ಗೃಹ ಸಚಿವ ರಾಜನಾಥ ಸಿಂಗ್ ನೇತೃತ್ವದ ಸಂಸದೀಯ ವ್ಯವಹಾರಗಳ ಸಂಪುಟ ಸಮಿತಿ ಸಭೆ ಶುಕ್ರವಾರ ತೀರ್ಮಾನ ಕೈಗೊಂಡಿದೆ.
ಈ ಸಂಬಂಧ ರಾಷ್ಟ್ರಪತಿ ಕೋವಿಂದ್ ಅವರಿಗೆ ಶಿಫಾರಸು ಮಾಡಿದೆ.ಈ ಅಧಿವೇಶನದಲ್ಲಿ ತ್ರಿವಳಿ ತಲಾಖ್ ಅನ್ನು ಅಪರಾಧ ಎಂದು ಘೋಷಿಸುವ ಮಸೂದೆ, ಹಿಂದುಳಿದ ವರ್ಗಗಳ ಆಯೋಗಕ್ಕೆ ಸಂಬಂಧಿಸಿದ ವಿಧೇಯಕ ಸೇರಿದಂತೆ ಹಲವಾರು ಮಸೂದೆಗಳನ್ನು ಸರ್ಕಾರ ಮಂಡಿಸುವ ನಿರೀಕ್ಷೆ ಇದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.