
ನವದೆಹಲಿ (ಜ.03): ಏಕಶ್ರೇಣಿ ಏಕ ವೇತನ (ಒಆರ್'ಒಪಿ) ಯೋಜನೆಗೆ ಅರ್ಹರಾದವರಿಗೆ ಜನವರಿ ಅಂತ್ಯದೊಳಗೆ ಹಣ ನೀಡಲಾಗುವುದು. ಸುಮಾರು 13 ಸಾವಿರ ಅರ್ಜಿಗಳನ್ನು ಪಿಂಚಣಿ ವಿತರಣಾ ಪ್ರಾಧಿಕಾರಕ್ಕೆ ಕಳುಹಿಸಲಾಗಿದೆ ಎಂದು ರಕ್ಷಣಾ ಸಚಿವ ಮನೋಹರ್ ಪರ್ರಿಕರ್ ಹೇಳಿದ್ದಾರೆ.
ರಕ್ಷಣಾ ಸಚಿವಾಲಯದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ, ಒಆರ್ ಒಪಿ ಬಹಳ ಮುಖ್ಯವಾದ ವಿಚಾರ. ಆದ್ದರಿಂದ ಜನವರಿ ಮೊದಲ ಅಥವಾ ಎರಡನೇ ವಾರದೊಳಗೆ ಪಿಂಚಣಿ ಕೊಡಲಿದ್ದೇವೆ. 13 ಸಾವಿರ ಅರ್ಜಿಗಳನ್ನು ಈಗಾಗಲೇ ಪಿಂಚಣಿ ವಿತರಣಾ ಪ್ರಾಧಿಕಾರಕ್ಕೆ ಕಳುಹಿಸಲಾಗಿದೆ. ಶೇ.99 ರಷ್ಟು ಸೈನಿಕರಿಗೆ ಸಿಗಲಿದೆ ಎಂದು ಪರ್ರಿಕರ್ ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.