ಮುರ್ಮು ಪ್ರಮಾಣವಚನ ಸಮಾರಂಭದಲ್ಲಿ ಭಾಗವಹಿಸಿ ಉಚ್ಛಾಟನೆಗೊಂಡ ಸಂಸದ!

By Web DeskFirst Published Nov 1, 2019, 7:25 PM IST
Highlights

ಜಮ್ಮು ಮತ್ತು ಕಾಶ್ಮೀರದ ಮೊದಲ ಲೆಫ್ಟಿನೆಂಟ್ ಗವರ್ನರ್ ಪ್ರಮಾಣವಚನ ಸಮಾರಂಭ| ಜಮ್ಮು ಮತ್ತು ಕಾಶ್ಮೀರದ ಮೊದಲ ಲೆಫ್ಟಿನೆಂಟ್ ಗವರ್ನರ್ ಗಿರೀಶ್ ಚಂದ್ರ ಮುರ್ಮು| ಪ್ರಮಾಣವಚನ ಸಮಾರಂಭದಲ್ಲಿ ಭಾಗವಹಿಸಿದ್ದ ಪಿಡಿಪಿ ರಾಜ್ಯಸಭಾ ಸಂಸದನಿಗೆ ಉಚ್ಛಾಟನೆ ಶಿಕ್ಷೆ | ಪ್ರಮಾಣವಚನ ಸಮಾರಂಭದಲ್ಲಿ ಭಾಗವಹಿಸಿ ಉಚ್ಛಾಟನೆಗೊಂಡ ನಾಝಿರ್ ಅಹ್ಮದ್ ಲಾವಯ್| ಪಕ್ಷದ ನಿಲುವಿಗೆ ವಿರುದ್ಧವಾಗಿ ಪ್ರಮಾಣವಚನ ಸಮಾರಂಭದಲ್ಲಿ ಭಾಗವಹಿಸಿದ ಆರೋಪ| 

ಶ್ರೀನಗರ(ನ.01): ಮಹತ್ವದ ಬೆಳವಣಿಗೆಯೊಂದರಲ್ಲಿ ಜಮ್ಮು ಮತ್ತು ಕಾಶ್ಮೀರದ ಮೊದಲ ಲೆಫ್ಟಿನೆಂಟ್ ಗವರ್ನರ್ ಗಿರೀಶ್ ಚಂದ್ರ ಮುರ್ಮು ಅವರ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಿದ್ದ ಪಿಡಿಪಿ ರಾಜ್ಯಸಭಾ ಸದಸ್ಯ ನಾಝಿರ್ ಅಹ್ಮದ್ ಲಾವಯ್ ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ.

ರಾಜ್ಯಸಭಾ ಸದಸ್ಯ ನಾಝಿರ್ ಅಹ್ಮದ್ ಲಾವಯ್ ಅವರನ್ನು ಪಕ್ಷ ವಿರೋಧಿ ಚಟುವಟಿಕೆ ಆರೋಪದ ಮೇಲೆ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟಿಸಲಾಗಿದೆ ಎಂದು ಪಿಡಿಪಿ ವಕ್ತಾರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಲಾವಯ್  ಪಕ್ಷದ ನಿಲುವಿಗೆ ವಿರುದ್ಧವಾಗಿ ಶ್ರೀನಗರದಲ್ಲಿ ನಡೆದ ಮುರ್ಮು ಅವರ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಿದ ಹಿನ್ನೆಲೆಯಲ್ಲಿ, ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಕಣಿವೆಗೆ ಗಿರೀಶ್, ಲಡಾಕ್‌ಗೆ ಮಾಥೂರ್ ಮೊದಲ ಲೆ. ಗವರ್ನರ್ ಆಗಿ ನೇಮಕ!

ಕಳೆದ ಆಗಸ್ಟ್ 5ರಂದು ಕೇಂದ್ರ ಸರ್ಕಾರ ಜಮ್ಮು-ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದುಗೊಳಿಸಿ, ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಕ್ ಕೇಂದ್ರಾಡಳಿತ ಪ್ರದೇಶಗಳೆಂದು ಘೋಷಿಸಿತ್ತು. ಅಲ್ಲದೇ ನಿನ್ನೆಯಷ್ಟೇ ಎರಡೂ ಕೇಂದ್ರಾಡಳಿತ ಪ್ರದೇಶಗಳಿಗೆ ಹೊಸ ಲೆ. ಗರ್ವನರ್‌ಗಳನ್ನು ನೇಮಿಸಿತ್ತು.

click me!