
ನವದೆಹಲಿ[ಆ.05]: ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ ಸಂವಿಧಾನದ ವಿಧಿ 35ಎ, 370ಯನ್ನು ರದ್ದುಗೊಳಿಸಲಾಗಿದೆ. ಈ ಮೂಲಕ ಜಮ್ಮು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನ ಮಾನ ಹಿಂಪಡೆಯಲಾಗಿದೆ. ಕೇಂದ್ರದ ಈ ನಿರ್ಧಾರವನ್ನು ಹಲವರು ಸ್ವಾಗತಿಸಿದ್ದಾರೆ ಆದರೆ ರಾಜ್ಯಸಭೆಯಲ್ಲಿ ಗೃಹ ಸಚಿವ ಅಮಿತ್ ಶಾ ಈ ಪ್ರಸ್ತಾವನೆಯನ್ನು ಮುಂದಿಡುತ್ತಿದ್ದಂತೆಯೇ ವಿರೋಧ ಪಕ್ಷಗಳು ತೀವ್ರ ಗದ್ದಲ ಮಾಡಿದ್ದಾರೆ. ಈ ವೇಳೆ ಓರ್ವ ಸಂಸದ ಸಂವಿಧಾನ ಪ್ರತಿಯನ್ನು ಹರಿದು ಹಾಕಿದರೆ, ಮತ್ತೊಬ್ಬ ಸಂಸದ ಬಟ್ಟೆ ಹರಿದು ಪ್ರತಿಭಟಿಸಿದ್ದಾರೆ.
ಆರ್ಟಿಕಲ್ 370 ರದ್ದು: ಮುಂದೇನು? ಜಮ್ಮು ಕಾಶ್ಮೀರದಲ್ಲಿ ಏನೆಲ್ಲಾ ಬದಲಾಗುತ್ತೆ?
ಹೌದು ಆರ್ಟಿಕಲ್ 370 ರದ್ದಾಗುತ್ತಿದ್ದಂತೆಯೇ ರಾಜ್ಯಸಭೆಯಲ್ಲಿ ಪ್ರತಿಪಕ್ಷಗಳು ತೀವ್ರ ವ್ಯಕ್ತಪಡಿಸಿದ್ದಾರೆ. ಪಿಡಿಪಿ ಸಂಸದ ನಾಜಿರ್ ಅಹಮದ್ ಲವಾಯ್ ಮತ್ತು ಎಂಎಂ ಫಯಾಜ್ ಸಂಸತ್ ಆವರಣದಲ್ಲೇ ಪ್ರತಿಭಟನೆ ನಡೆಸಿದ್ದಾರೆ. ಸಂವಿಧಾನವನ್ನು ಪ್ರತಿ ಹರಿದು ಹಾಕಿದ್ದಲ್ಲದೇ, ಸಂಸದ ಫಯಾಜ್ ತಾನು ಧರಿಸಿದ್ದ ಕುರ್ತಾ ಹರಿದು ಪ್ರತಿಭಟಿಸಿದ್ದಾರೆ.
ಸಂಸದರ ಈ ವರ್ತನೆಗೆ ರಾಜ್ಯಸಭಾ ಅಧ್ಯಕ್ಷ ವೆಂಕಯ್ಯ ನಾಯ್ಡು ಇಬ್ಬರನ್ನೂ ಹೊರ ಕಳುಹಿಸಿದ್ದಾರೆ.
ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ರದ್ದು: ಕೇಂದ್ರದ ಐತಿಹಾಸಿಕ ನಿರ್ಣಯ
ಕಾಶ್ಮೀರದಲ್ಲಿ ಅಲ್ಲೋಲ ಕಲ್ಲೋಲ; ಮೋದಿ ಶಾ ತಂತ್ರವೇನು?
ಕಾಶ್ಮೀರದಲ್ಲಿ ಮಧ್ಯರಾತ್ರಿ ನಿಷೇಧಾಜ್ಞೆ, ಇಂಟರ್ನೆಟ್ ಸ್ಥಗಿತ, ಒಮರ್, ಮುಫ್ತಿಗೆ ದಿಗ್ಭಂಧನ!
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.