
ಉಡುಪಿ (ನ. 11): ಅನಂತ್ ಕುಮಾರ್ ನಿಧನಕ್ಕೆ ಪೇಜಾವರ ಶ್ರೀಗಳು ಸಂತಾಪ ಸೂಚಿಸಿದ್ದಾರೆ.
ನಮ್ಮ ರಾಜ್ಯದ ನಾಯಕರಲ್ಲಿ ಒಬ್ಬರಾದ ಶ್ರೀಯುತ ಅನಂತ ಕುಮಾರ್ ನಿಧನದಿಂದ ನಮಗೆ ಅತ್ಯಂತ ವಿಷಾದವಾಗಿದೆ. ಇವರು ಕೇಂದ್ರ ಸಚಿವರಾಗಿ ರಾಜ್ಯದ ಅಭಿವೃದ್ಧಿಗೆ ಬಹುಮುಖವಾದ ಸೇವೆಯನ್ನು ಸಲ್ಲಿಸಿದ ಧೀಮಂತ ನೇತಾರರಾಗಿದ್ದರು. ನಮ್ಮ ಪರ್ಯಾಯದ ಅವಧಿಯಲ್ಲಿ ನಿರ್ಮಾಣಗೊಂಡ ಕನಕ ಮಂಟಪ ಕಾರ್ಯ, ಪಾಜಕ ಕ್ಷೇತ್ರದ ಅಭಿವೃದ್ಧಿ ಮುಂತಾದ ಅನೇಕ ಕಾರ್ಯಗಳಿಗೆ ಸರಕಾರದಿಂದ ಸಹಾಯ ಕೊಡಿಸಿದ್ದರು.
ದಕ್ಷರೂ,ತರುಣರೂ,ಉತ್ಸಾಹಶೀಲರೂ ಆಗಿರುವ ಇವರಿಂದ ಕರ್ನಾಟಕಕ್ಕೆ ಇನ್ನೂ ಹೆಚ್ಚಿನ ಸೇವೆ ದೊರೆಯುವ ನಿರೀಕ್ಷೆಯಿತ್ತು.ಇವರ ಅಕಾಲಿಕ ನಿಧನದಿಂದ ರಾಜ್ಯಕ್ಕೆ ಅಪಾರ ನಷ್ಟವಾಗಿದೆ. ಇವರಿಗೆ ಭಗವಂತನು ಸದ್ಗತಿಯನ್ನು ನೀಡಲಿ ಎಂದು ಶ್ರೀ ವಿಶ್ವೇಶತೀರ್ಥ ಶ್ರೀ ಪಾದರು ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.