ಅದ್ದೂರಿಯಾಗಿ ದಸರಾ ಆಚರಣೆ ವೇಳೆಯಲ್ಲಿ ಪಕ್ಕದ ಕಟ್ಟಡ ಕುಸಿದು ಇಬ್ಬರು ಮೃತಪಟ್ಟು, 20 ಜನ ಗಾಯಗೊಂಡಿರುವ ಘಟನೆ ತೆಲಂಗಾಣದ ನಿಜಮಾಬಾದ್'ನಲ್ಲಿ ನಡೆದಿದೆ.
ತೆಲ್ಲಂಗಾನ(ಅ.01): ಅದ್ದೂರಿಯಾಗಿ ದಸರಾ ಆಚರಣೆ ವೇಳೆಯಲ್ಲಿ ಪಕ್ಕದ ಕಟ್ಟಡ ಕುಸಿದು ಇಬ್ಬರು ಮೃತಪಟ್ಟು, 20 ಜನ ಗಾಯಗೊಂಡಿರುವ ಘಟನೆ ತೆಲಂಗಾಣದ ನಿಜಮಾಬಾದ್'ನಲ್ಲಿ ನಡೆದಿದೆ.
ದಸರಾ ಆಚರಣೆ ಹಿನ್ನಲೆಯಲ್ಲಿ ಸ್ಥಳದಲ್ಲಿ ಭಾರೀ ಸಂಖ್ಯೆಯಲ್ಲಿ ಜನರು ನೆರೆದಿದ್ದರು. ಕಾರ್ಯಕ್ರಮ ನೋಡರು ಅಕ್ಕಪಕ್ಕದ ಕಟ್ಟದ ಮೇಲೆ ಜನರು ನಿಂತಿದ್ದರು. ಈ ವೇಳೆ ಸ್ಥಳದಲ್ಲಿದ್ದ ಕಟ್ಟಡವೊಂದು ಇದ್ದಕ್ಕಿದ್ದಂತೆ ಕುಸಿದು ಬಿದ್ದಿದೆ.
ಕಟ್ಟಡದಲ್ಲಿ ಇನ್ನೂ ಹಲವರು ಸಿಲುಕಿ ಹಾಕಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಅಗ್ನಿಶಾಮಕ ದಳ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ.ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಸಾವಿನ ಸಂಖ್ಯೆ ಏರುವ ಸಾಧ್ಯತೆ ಇದೆ.