
ಚಿಕ್ಕಮಗಳೂರು(ಅ.18): ಇಷ್ಟಾರ್ಥ ಸಿದ್ಧಿಗಾಗಿ ಭಕ್ತರು ನಾನಾ ರೀತಿಯಲ್ಲಿ ದೇವರ ಮೊರೆ ಹೋಗ್ತಾರೆ. ಆದರೆ, ಚಿಕ್ಕಮಗಳೂರಿನ ದೇವಿರಮ್ಮನ ಭಕ್ತರು ತಮ್ಮ ಬೇಡಿಕೆ ಈಡೇರಿಕೆಗಾಗಿ ದೇವರೆದುರು ದೇಹವನ್ನು ದಂಡಿಸುತ್ತಾರೆ. ನರಕ ಚತುರ್ದಶಿಯಂದು ಈ ವಿಶಿಷ್ಟ ಆಚರಣೆ ನಡೆಯಲಿದೆ.
ಭಕ್ತರು ಬರಿಗಾಲಲ್ಲೇ 3000 ಅಡಿ ಎತ್ತರದ ಬೆಟ್ಟವನ್ನೇರಿ ಹರಕೆ ತೀರಿಸುತ್ತಾರೆ. ನರಕ ಚತುದರ್ಶಿಯಂದು ಕಾಲಿಗೆ ಚಪ್ಪಲಿಯನ್ನು ಹಾಕದೆ ಕಾಡಿನ ಹಾದಿ, ಕಲ್ಲು-ಮುಳ್ಳುಗಳ ನಡುವೆ ಬೆಟ್ಟವನ್ನೇರಿ ದೇವಿಯ ದರ್ಶನ ಪಡೆದು ಭಕ್ತರು ಪುನೀತರಾಗ್ತಾರೆ. ಭಕ್ತರಿಗೆ ಯಾವುದೇ ತೊಂದರೆಯಾಗದಂತೆ ದೇವಾಲಯ ಆಡಳಿತ ಮಂಡಳಿ ಹಾಗೂ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ.
ಈ ಬಾರಿ ಲಕ್ಷಕ್ಕೂ ಅಧಿಕ ಸಂಖ್ಯೆಯ ಭಕ್ತರು ಬೆಟ್ಟವನ್ನೆರೋ ನಿರೀಕ್ಷೆಯಿದ್ದು, ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.